
ನವದೆಹಲಿ: ನಾಡಿಯಾ ಜಿಲ್ಲೆಯ 71 ವರ್ಷದ ನನ್ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸಿಬಿಐ ಸಿಫಾರಸು ಮಾಡಿದ್ದ ಪಶ್ಚಿಮ ಬಂಗಾಳ ಸರ್ಕಾರದ ಮನವಿಯನ್ನು ಶುಕ್ರವಾರ ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ಗ್ಯಾಂಗ್‌ರೇಪ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಪಶ್ಚಿಮ ಬಂಗಾಳ ಸರ್ಕಾರ ಮಾಡಿದ್ದ ಶಿಫಾರಸಿನ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು, ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಪ್ರಕರಣದ ಗಂಭೀರತೆ ಮತ್ತು ಸೂಕ್ಷ್ಮತೆಯನ್ನು ಗಮನಿಸಿ ಸಿಬಿಐ ತನಿಖೆಗೆ ಶಿಫಾರಸು ಮಾಡಿರುವುದಾಗಿ ಕಳೆದ ಮಾರ್ಚ್ 19ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದರು. ಅಲ್ಲದೆ ಈ ಸಂಬಂಧ ಕೇಂದ್ರದ ತನಿಖಾ ಸಂಸ್ಥೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು.
ಈ ಮಧ್ಯೆ, ಪ್ರಕರಣ ಸಂಬಂಧ ನಿನ್ನೆ ಬಂಧನಕ್ಕೊಳಗಾಗಿದ್ದ ಎರಡನೇ ಆರೋಪಿ ಗೋಪಾಲ್ ಸರ್ಕಾರ್‌ನನ್ನು ಇಂದು ಪಶ್ಚಿಮ ಬಂಗಾಳ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದರು. ಕೋರ್ಟ್ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Advertisement