ವಾಜಪೇಯಿ ಅವರಿಗೆ ಇಂದು ಭಾರತ ರತ್ನ ಪ್ರದಾನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರಧಾನ...
ಭಾರತ ರತ್ನ ಪ್ರಶಸ್ತಿ
ಭಾರತ ರತ್ನ ಪ್ರಶಸ್ತಿ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ವಾಜಪೇಯಿ ಅವರ ನಿವಾಸದಲ್ಲಿಯೇ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

ಪ್ರಸ್ತುತ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಕಾಂಗ್ರೆಸ್ ನೇತಾರ ಸಂದೀಪ್ ದೀಕ್ಷಿತ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

ಮಾರ್ಚ್ 30ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಂಡಿತ್ ಮದನ್ ಮೋಹನ್ ಮಾಳವಿಯಾ (ಮರಣೋತ್ತರ) ಭಾರತರತ್ನ  ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com