ಯುವಜನತೆಗೆ ಉದ್ಯೋಗ ಸೃಷ್ಟಿ, ಆರ್ಥಿಕ ಅಭಿವೃದ್ಧಿಗೆ ವಿದೇಶ ಪ್ರವಾಸ: ಮೋದಿ

ಯುವಜನತೆಗೆ ಉದ್ಯೋಗ ಸೃಷ್ಟಿಸುವುದು ಹಾಗೂ ದೇಶದ ಆರ್ಥಿಕತೆಯ ಉತ್ತೇಜನೆ ನೀಡುವುದಕ್ಕೆ ವಿದೇಶಿ ಪ್ರವಾಸ ಕೈಗೊಂಡಿದ್ದೇನೆ ಎಂದು ಪ್ರಧಾನಿ...
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಯುವಜನತೆಗೆ ಉದ್ಯೋಗ ಸೃಷ್ಟಿಸುವುದು ಹಾಗೂ ದೇಶದ ಆರ್ಥಿಕತೆಯ ಉತ್ತೇಜನೆ ನೀಡುವುದಕ್ಕೆ ವಿದೇಶಿ ಪ್ರವಾಸ ಕೈಗೊಂಡಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಫ್ರಾನ್ಸ್, ಜರ್ಮನಿ ಹಾಗೂ ಕೆನಡ ಪ್ರವಾಸ ಕೈಗೊಳ್ಳುತ್ತಿರುವುದೇ ಯುವಜನತೆಗೆ ಉದ್ಯೋಗ ಸೃಷ್ಟಿಸುವುದರ ಜೊತೆಗೆ, ದೇಶದ ಆರ್ಥಿಕ ಅಭಿವೃದ್ಧಿಗೊಳಿಸುವುದು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಏಪ್ರಿಲ್ 9ರಂದು ವಿದೇಶ ಪ್ರವಾಸ ಕೈಗೊಳ್ಳಲಿರುವ ನರೇಂದ್ರ ಮೋದಿ, ಎಂಟು ದಿನಗಳ ಅವಧಿಯಲ್ಲಿ ಫ್ರಾನ್ಸ್, ಜರ್ಮನಿ ಹಾಗೂ ಕೆನಡ ರಾಷ್ಟ್ರಗಳಿಗೆ ಭೇಟಿ ನೀಡಲಿದ್ದಾರೆ.

ಭಾರತ ಮತ್ತು ಫ್ರಾನ್ಸ್ ನಡುವೆ ಆರ್ಥಿಕ ಸಹಕಾರ ಬಲಗೊಳಿಸುವ ಬಗ್ಗೆ ಚರ್ಚಿಸಲಿದ್ದು, ಪ್ಯಾರಿಸ್ ಹೊರವಲಯದಲ್ಲಿ ಕೆಲವು ಅತ್ಯಾಧುನಿಕ ಕೈಗಾರಿಕಾ ಘಟಕಗಳಿಗೆ ಭೇಟಿ ನೀಡುವೆ ಎಂದು ಟ್ವೀಟ್ ಮಾಡಿದ್ದಾರೆ.

ನಾನು ಹಾಗೂ ಚಾನ್ಸಲರ್ ಎಂಜೆಲಾ ಮರ್ಕೆಲ್ ಅವರು ಹ್ಯಾನ್ನೋವರ್ ಮೆಸೆ ( ಕೈಗಾರಿಕಾ ಉತ್ಸವ) ಅನ್ನು ಜಂಟಿಯಾಗಿ ಉದ್ಘಾಟಿಸಲಿದ್ದೇವೆ. ಅದರಲ್ಲಿ ಭಾರತವೂ ಪಾಲ್ಗೊಳ್ಳುತ್ತಿದೆ’ ಎಂದು ಜರ್ಮನಿಗೆ ಭೇಟಿ ಕುರಿತು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ಪ್ರವಾಸದ ಕೊನೆಯ ಭಾಗವಾಗಿ ಕೆನಡಗೆ ಪ್ರಯಾಣಿಸಲಿದ್ದು, ಕೆನಡ ಜತೆಗೆ ಸಂಬಂಧವನ್ನು ವೃದ್ಧಿಸುವ ನಿಟ್ಟಿನಲ್ಲಿ ಹಾಗೂ ಅಲ್ಲಿನ ನಾಯಕರು, ಕೈಗಾರಿಕಾ ಮುಖ್ಯಸ್ಥರು ಮತ್ತು ಭಾರತೀಯರನ್ನು ಭೇಟಿ ಮಾಡಲು ಉತ್ಸುಕನಾಗಿರುವೆ’ ಎಂದು ಅವರು ಟ್ವೀಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com