ಕರ್ನಾಟಕದ ಕಾವೇರಿ ಅಣೆಕಟ್ಟು ವಿರೋಧಿಸಿ ತಮಿಳುನಾಡಿನಾದ್ಯಂತ ರೈತರ ಪ್ರತಿಭಟನೆ

ಮೇಕೆದಾಟುವಿನಲ್ಲಿ ಹೊಸ ಅಣೆಕಟ್ಟು ನಿರ್ಮಿಸುವಂತೆ ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ವಿರೋಧಿಸಿ ತಮಿಳುನಾಡಿನ ರೈತರು ತಮಿಳುನಾಡಿನಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ...
ಮೇಕೆದಾಟು ಅಣೆಕಟ್ಟು ವಿರೋಧಿ ತಮಿಳುನಾಡಿನಾದ್ಯಂತ ಪ್ರತಿಭಟನೆ
ಮೇಕೆದಾಟು ಅಣೆಕಟ್ಟು ವಿರೋಧಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಚೆನ್ನೈ: ಮೇಕೆದಾಟುವಿನಲ್ಲಿ ಹೊಸ ಅಣೆಕಟ್ಟು ನಿರ್ಮಿಸುವಂತೆ ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ವಿರೋಧಿಸಿ ತಮಿಳುನಾಡಿನ ರೈತರು ತಮಿಳುನಾಡಿನಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ..

ಅಣೆಕಟ್ಟು ನಿರ್ಮಾಣ ಕುರಿತಂತೆ ರೈತರ ವಿರೋಧಕ್ಕೆ ಬೆಂಬಲ ಸೂಚಿಸಿರುವ ಅಲ್ಲಿನ ರಾಜಕೀಯ ಪಕ್ಷಗಳು ಪ್ರತಿಭಟನೆಗೆ ಕೈಜೋಡಿಸಿವೆ. ರೈತರು ಕರೆ ನೀಡಿರುವ ಬಂದ್ ಗೆ ತಮಿಳುನಾಡಿನಾದ್ಯಂತ ಬೆಂಬಲವ್ಯಕ್ತವಾಗಿದ್ದು, ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಎಲ್ಲಾ ಬಸ್ ಗಳನ್ನು ತಡೆಹಿಡಿಯಲಾಗಿದೆ. ತಮಿಳುನಾಡಿನ ತಂಜಾವೂರು, ಪಾಂಡಿಚೆರಿ ಹಾಗೂ ಇನ್ನಿತರೆ ಜಿಲ್ಲೆಗಳು ಸಂಪೂರ್ಣ ಬಂದ್ ಆಗಿದ್ದು, ಬಂದ್ ಗೆ ಚೆನ್ನೈನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

2013ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕ ಸರ್ಕಾರ ಮೊದಲು ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡುವ ಪ್ರಸ್ತಾಪವನ್ನು ಮುಂದಿಟ್ಟಿತು. ಮಳೆಗಾಲದ ಸಂದರ್ಭದಲ್ಲಿ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗುತ್ತದೆ. ಅಂತಹ ಸಂದರ್ಭದಲ್ಲಿ ನೀರನ್ನು ಸಂಗ್ರಹಿಸಿ, ಮೈಸೂರು, ಬೆಂಗಳೂರು ನಗರಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಿಕೊಳ್ಳುವುದು ಯೋಜನೆ ಮುಖ್ಯ ಉದ್ದೇಶವಾಗಿತ್ತು. ಮೇಕೆದಾಟುವಿನಲ್ಲಿ 22 ಕಡೆ ಅಣೆಕಟ್ಟು ನಿರ್ಮಾಣ ಮಾಡಲು ಸ್ಥಳ ಗುರುತಿಸಲಾಗಿದ್ದು, ಈ ಯೋಜನೆಯು ಪೂರ್ಣಗೊಂಡಲ್ಲಿ ಸುಮಾರು 48 ಟಿಎಂಸಿ ನೀರು ಸಂಗ್ರಹಣೆ ಮಾಡಬಹುದಾಗಿದೆ. ಕರ್ನಾಟಕವಿನ್ನೂ ಯೋಜನೆ ಪ್ರಸ್ತಾವನೆ ಮುಂದಿಟ್ಟಿದ್ದು, ಯೋಜನಾ ವರದಿ ತಯಾರಿಸಿ ಕೇಂದ್ರ ಜಲಮಂಡಳಿ ಯೋಜನಾ ಸಮಿತಿಗೆ ಕಳುಹಿಸಿಕೊಟ್ಟು, ಅಲ್ಲಿ ಒಪ್ಪಿಗೆ ಸಿಕ್ಕ ನಂತರ ಯೋಜನೆ ಆರಂಭವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com