
ಮುಂಬೈ: ಇನ್ನು ಮುಂದೆ ಮಹಾರಾಷ್ಟ್ರದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅರಿಗೆ ವಿಮಾ ಕಂಪನಿಗಳಿಂದ ಪರಿಹಾರ ಸಿಗುವ ಸಾಧ್ಯತೆ ಇದೆ.
ಇಂಥ ನಿರ್ಧಾರವನ್ನು ಅಲ್ಲಿನ ಸರ್ಕಾರ ಪ್ರಕಟಿಸಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ರೈತರು ಆತ್ಮಹತ್ಯೆಗೆ ಶರಣಾದರೆ ರು. 5 ಲಕ್ಷ ಸಿಗಲಿದೆ.
ಅದಕ್ಕಾಗಿ ಮಹಾರಾಷ್ಟ್ರ ಸರ್ಕಾರ ಖಾಸಗಿ ವಿಮಾ ಕಂಪನಿಗಳ ಜತೆ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಕೃಷಿ ಸಚಿವ ಏಕ್ ನಾಥ್ ಖಾಡ್ಸೆ ತಿಳಿಸಿದ್ದಾರೆ. ಆದರೆ ಪ್ರಸ್ತಾಪಕ್ಕೆ ದೇವೇಂದ್ರ ಫಢ್ನವೀಸ್ ಸಂಪುಟದಲ್ಲೇ ವಿರೋಧ ವ್ಯಕ್ತವಾಗಿದೆ. ಇಂಥ ಕ್ರಮದಿಂದ ಆತ್ಮಹತ್ಯೆ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.
Advertisement