

ನವದೆಹಲಿ: ಕರ್ನಾಟಕ ತಮಿಳುನಾಡು ರಾಜ್ಯಗಳ ನಡುವೆ ಕೋಲಾಹಲಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟುವುದು ಶತಃಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡಿಲ್ಲ. ಅಣೆಕಟ್ಟು ನಿರ್ಮಾಣದ ಬಗ್ಗೆ ಯಾವುದೇ ಪ್ರಸ್ತಾಪ ಕರ್ನಾಟಕ ರಾಜ್ಯದಿಂದ ಬಂದಿಲ್ಲ ಎಂದು ಜಾವಡೇಕರ್ ಹೇಳಿದ್ದು, ಈ ಮೂಲಕ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಬಯಲಾದಂತಾಗಿದೆ.
ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕುರಿತಾಗಿ ಕರ್ನಾಟಕ ಸರ್ಕಾರದಿಂದ ಈವರೆಗೂ ಕೇಂದ್ರ ಸರ್ಕಾರಕ್ಕೆ ಯಾವುದೇ ಮನವಿ ಮಾಡಿಲ್ಲ ಎಂದ ಜಾವಡೇಕರ್, ಮೇಕೆದಾಟು ಅಣೆಕಟ್ಟು ಯೋಜನೆಗೆ ಕರ್ನಾಟಕ ಸರ್ಕಾರ 25 ಕೋಟಿ ರೂಪಾಯಿ ಮೀಸಲಿಟ್ಟಿರುವ ಬಗ್ಗೆಯೂ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.