ಪಾಕಿಸ್ತಾನದಲ್ಲಿ ಮತ್ತೆ ಶಾಲೆ ಮೇಲೆ ದಾಳಿ, ಓರ್ವ ಸಾವು

ಪಾಕಿಸ್ತಾನದಲ್ಲಿ ಸೋಮವಾರ ಮತ್ತೆ ಶಾಲೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಶಾಲಾ ಭದ್ರತಾ ಸಿಬ್ಬಂದಿಯೊಬ್ಬರು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸೋಮವಾರ ಮತ್ತೆ ಶಾಲೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಶಾಲಾ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆರಾ ಘಾಝಿ ಖಾನ್ ಹೈಸ್ಕೂಲ್ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಶಾಲೆಯ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಶಾಲಾ ಮಕ್ಕಳು ಹಾಗೂ ಶಿಕ್ಷಕರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ಶಾಲೆಯ ಒಳಗ್ಗೆ ಎಷ್ಟು ಬಂದೂಕುಧಾರಿಗಳು ನುಗ್ಗಿದ್ದಾರೆ ಮತ್ತು ಒಳಗಡೆ ಎಷ್ಟು ಜನ ಇದ್ದಾರೆ ಎಂಬುದರ ಬಗ್ಗೆ ಇನ್ನು ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ' ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ರೆಹಮತ್ ಉಲ್ಲಾಹ್ ಖಾನ್ ನಾಜಿ ಅವರು ರಾಯಿಟರ್ಸ್ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.

ಕಳೆದ ವರ್ಷ ಡಿಸೆಂಬರ್ 16ರಂದು ಪಾಕಿಸ್ತಾನದ ಪೇಶಾವರದ ಸೇನಾ ಶಾಲೆಯನ್ನು ಗುರಿಯಾಗಿಸಿಕೊಂಡು ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದರು. ಘಟನೆಯಲ್ಲಿ 100 ಮಕ್ಕಳು ಸೇರಿದಂತೆ 132 ಮಂದಿ ಮೃತಪಟ್ಟಿದ್ದರು ಮತ್ತು 40ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com