ಹಿಟ್ ಆಂಡ್ ರನ್ ಕೇಸ್: ನಟ ಸಲ್ಮಾನ್ ಖಾನ್ ಗೆ ಮಧ್ಯಂತರ ಜಾಮೀನು

2002ರ ಹಿಟ್ ಆಂಟ್ ರನ್ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಎರಡು...
ಸಲ್ಮಾನ್ ಖಾನ್
ಸಲ್ಮಾನ್ ಖಾನ್
Updated on: 

ಮುಂಬೈ: 2002ರ ಹಿಟ್ ಆಂಟ್ ರನ್ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಹಾಗೂ ಜಾಮೀನು ಕೋರಿ ಸಲ್ಮಾನ್ ಖಾನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ತಾಂತ್ರಿಕ ಕಾರಣಗಳಿಂದಾಗಿ ಎರಡು ದಿನದ ಮಧ್ಯಂತರ ಜಾಮೀನು ನೀಡಿ, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ವಕೀಲ ಹರೀಶ್ ಸಾಳ್ವೆ ಅವರು ಸಲ್ಮಾನ್ ಪರ ವಾದ ಮಂಡಿಸಿದ್ದರು.

ಸುದೀರ್ಘ 12 ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್, ಇಂದು ತೀರ್ಪು ಪ್ರಕಟಿಸಿತ್ತು. ಬೆಳಗ್ಗೆ 11.15ಕ್ಕೆ ತೀರ್ಪು ಪ್ರಕಟಿಸಿದ ಜಡ್ಜ್ ಡಿ.ವಿ.ದೇಶಾಪಂಡೆ ಅವರು, ಸಲ್ಮಾನ್ ವಿರುದ್ಧದ ಉದ್ದೇಶರಹಿತ ಮಾನವ ಹತ್ಯೆ ಆರೋಪ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಚಾಲನೆ ಮಾಡಿದ ಆರೋಪ, ಕುಡಿದು ವಾಹನ ಚಾಲನೆ, ಅತಿ ವೇಗ, ಅಜಾಗರೂಕತೆಯಿಂದ ಚಾಲನೆ ಮಾಡಿದ ಆರೋಪಗಳು ಸಾಬೀತಾಗಿದ್ದು, ಬಾಲಿವುಡ್ ನಟ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದರು.

ವಾದ-ವಿವಾದದ ಬಳಿಕ ಮಧ್ಯಾಹ್ನ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಮೂರ್ತಿ ದೇಶಪಾಂಡೆ ಅವರು, ಸಲ್ಮಾನ್ ಖಾನ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದರು.

ತೀರ್ಪು ಪ್ರಕಟವಾಗುತ್ತಿದ್ದಂತೆ ಪೊಲೀಸರು ಸಲ್ಮಾನ್ ಖಾನ್ ಅವರನ್ನು ವಶಕ್ಕೆ ಪಡೆದಿದ್ದು, ಕೋರ್ಟ್ ನಿಂದ ನೇರವಾಗಿ ಮುಂಬೈನ ಆರ್ಥರ್ ರಸ್ತೆ ಜೈಲಿಗೆ ಕರೆದೊಯ್ಯಲಾಗಿದೆ.

2002, ಸೆಪ್ಟೆಂಬರ್ 28ರಂದು ಮದ್ಯಪಾನ ಸೇವಿಸಿ ಕಾರು ಚಲಾಯಿಸುತ್ತಿದ್ದ ಸಲ್ಮಾನ್ ಖಾನ್, ತನ್ನ ಕಾರನ್ನು ಮುಂಬೈ ಉಪನಗರದ ಬಾಂದ್ರಾದ ಬೇಕರಿಯೊಂದಕ್ಕೆ ನುಗ್ಗಿಸಿದ ಕಾರಣ ಫುಟ್‌ಪಾತ್‌ನಲ್ಲಿ ಮಲಗಿದ್ದ ಐವರಲ್ಲಿ ಒಬ್ಬ ಸಾವಿಗೀಡಾಗಿದ್ದ. ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಮೇಲೆ ಉದ್ದೇಶಪೂರ್ವಕವಲ್ಲದ ಕೊಲೆ ಪ್ರಕರಣ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com