
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹಣೆಬರಹ ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಹಿಟ್ ಆಂಟ್ ರನ್ ಪ್ರಕರಣದ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ಸಲ್ಮಾನ್ ಖಾನ್ ಈಗಾಗಲೇ ಕೋರ್ಟ್‌ಗೆ ಆಗಮಿಸಿದ್ದಾರೆ.
ಮುಂಬೈ ಸೆಷನ್ಸ್ ಕೋರ್ಟ್ 11.30ರ ಸುಮಾರಿಗೆ ಅನಿರೀಕ್ಷಿತ ಬೆಳವಣಿಗೆಗಳಿಗೆ ಸಾಕ್ಷಿಯಾದ 12 ವರ್ಷ ಹಳೆಯ ಗುದ್ದೋಡು ಪ್ರಕರಣದ ತೀರ್ಪು ಪ್ರಕಟಿಸಲಿದೆ.
2002ರಲ್ಲಿ ಮದ್ಯಪಾನ ಸೇವಿಸಿ ಕಾರು ಚಲಾಯಿಸುತ್ತಿದ್ದ ಸಲ್ಮಾನ್ ಖಾನ್, ತನ್ನ ಕಾರನ್ನು ಬೇಕರಿಯೊಂದಕ್ಕೆ ನುಗ್ಗಿಸಿದ ಕಾರಣ ಫುಟ್‌ಪಾತ್‌ನಲ್ಲಿ ಮಲಗಿದ್ದ ಐವರಲ್ಲಿ ಒಬ್ಬ ಸಾವಿಗೀಡಾಗಿದ್ದ. ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಮೇಲೆ ಉದ್ದೇಶಪೂರ್ವಕವಲ್ಲದ ಕೊಲೆ ಪ್ರಕರಣ ದಾಖಲಿಸಲಾಗಿತ್ತು.
ಸುದೀರ್ಘ 12 ವರ್ಷಗಳ ಕಾಲ ವಿಚಾರಣೆ ನಡೆದು, ಕಳೆದ ತಿಂಗಳು ಸೆಷನ್ಸ್ ಜಡ್ಜ್ ಡಿ.ವಿ.ದೇಶಾಪಂಡೆ ಅವರು ಪ್ರಕರಣದ ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದಾರೆ. ಅದರಂತೆ ಇಂದು ಬಾಲಿವುಡ್ ನಟನ ಭವಿಷ್ಯ ನಿರ್ಧಾರವಾಗಲಿದೆ.
ಒಂದು ವೇಳೆ ಸಲ್ಮಾನ್ ಖಾನ್ ತಪ್ಪಿತಸ್ಥರೆಂದು ಸಾಬೀತಾದರೆ ಅವರಿಗೆ 10 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ. ತೀರ್ಪು ಹಿನ್ನೆಲೆಯಲ್ಲಿ ಮುಂಬೈ ಸೆಷನ್ಸ್ ಕೋರ್ಟ್ ಸುತ್ತಲೂ ಬಿಗಿಭದ್ರತೆ ಏರ್ಪಡಿಸಲಾಗಿದೆ. ಕೇವಲ ವಕೀಲರು, ಮಾಧ್ಯಮದವರಿಗೆ ಮಾತ್ರ ಪ್ರವೇಶ ನೀಡಲಾಗಿದೆ.
Advertisement