ಮಣಿರತ್ನಂ ಹೋಗಿದ್ದು ಸಾಮಾನ್ಯ ಆರೋಗ್ಯ ತಪಾಸಣೆಗೆ: ಮಾಲಾ ಮಣಿಯನ್ ಸ್ಪಷ್ಟನೆ

ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆಂಬ ಸುದ್ದಿ ಸುಳ್ಳು, ಸಾಮಾನ್ಯ ವೈದ್ಯಕೀಯ ತಪಾಸಣೆಗಾಗಿ ಮಣಿರತ್ನಂ ಆಸ್ಪತ್ರೆಗೆ ಹೋಗಿದ್ದರು ಎಂದು ಮಣಿರತ್ನಂ ಅವರ ಕಾರ್ಯಕಾರಿ ನಿರ್ಮಾಪಕರಾಗಿದ್ದ ಮಾಲಾ ಮಣಿಯನ್ ಬುಧವಾರ ಹೇಳಿದ್ದಾರೆ...
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ
Updated on: 

ನವದೆಹಲಿ: ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆಂಬ ಸುದ್ದಿ ಸುಳ್ಳು, ಸಾಮಾನ್ಯ ವೈದ್ಯಕೀಯ ತಪಾಸಣೆಗಾಗಿ ಮಣಿರತ್ನಂ ಆಸ್ಪತ್ರೆಗೆ ಹೋಗಿದ್ದರು ಎಂದು ಮಣಿರತ್ನಂ ಅವರ ಕಾರ್ಯಕಾರಿ ನಿರ್ಮಾಪಕರಾಗಿದ್ದ ಮಾಲಾ ಮಣಿಯನ್ ಬುಧವಾರ ಹೇಳಿದ್ದಾರೆ.

ನಿನ್ನೆ ಬೆಳಿಗ್ಗೆ ಹೃದಯ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಮಣಿರತ್ನಂ ಅವರನ್ನು ದೆಹಲಿಯ ಇಂದ್ರಪ್ರಸ್ಥದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಣಿರತ್ನಂ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿತ್ತು.

ಈ ಕುರಿತಂತೆ ಸ್ಪಷ್ಟನೆ ನೀಡಿರುವ ಮಣಿರತ್ನಂ ಅವರ ಕಾರ್ಯಕಾರಿ ನಿರ್ಮಾಪಕಿ ಮಾಲಾ ಮಣಿಯನ್, ಇದೊಂದು ಸುಳ್ಳು ಸುದ್ದಿಯಾಗಿದ್ದು, ಮಣಿರತ್ನಂ ಹಾಗೂ ಅವರ ಪತ್ನಿ ದೆಹಲಿಯಲ್ಲಿ ರಜಾ ದಿನಗಳನ್ನು ಕಳೆಯುತ್ತಿದ್ದು, ಹಲವು ದಿನಗಳಿಂದ ಅವರು ಆರೋಗ್ಯ ತಪಾಸಣೆ ಮಾಡಿಸಿರಲಿಲ್ಲ. ಹೀಗಾಗಿ ಅಭಿಮಾನಿಗಳ ಕಣ್ಣು ತಪ್ಪಿಸಿ ದೆಹಲಿ ಆಸ್ಪತ್ರೆಯಲ್ಲೇ ತಪಾಸಣೆಗೆ ಹೋಗಿದ್ದರು ಎಂದು ಹೇಳಿದ್ದಾರೆ.

ಖ್ಯಾತ ನಟಿ ಸುಹಾಸಿನಿ ಅವರ ಪತಿಯಾಗಿರುವ ಮಣಿರತ್ನಂ ಅವರು, ಕನ್ನಡದ ಪಲ್ಲವಿ ಅನುಪಲ್ಲವಿ ಚಿತ್ರವನ್ನು ನಿರ್ದೇಶನ ಮಾಡುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ನಂತರ ಬಾಂಬೆ, ರೋಜಾ, ದಿಲ್ ಸೆ ಮತ್ತು ಗುರು ಸೇರಿದಂತೆ ಇನ್ನೂ ಅಧಿಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com