ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಚೀನಾ ಪ್ರವಾಸ

ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದಿನ ವಾರ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ಬೀಜಿಂಗ್: ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದಿನ ವಾರ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಮೇ 13ರಿಂದ 16 ರವರೆಗೆ ಚೀನಾ ಪ್ರವಾಸ ಕೈಗೊಳ್ಳಲಿರುವ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಮೇಲೆ ಚೀನಾಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ಹಲವು ದಶಕಗಳಿಂದ ಭಾರತ ಮತ್ತು ಚೀನಾ ದೇಶಗಳ ನಡುವೆ ಐತಿಹಾಸಿಕ ಹಾಗೂ ವಾಣಿಜ್ಯ ಒಪ್ಪಂದಗಳು ಏರ್ಪಟ್ಟು ಉತ್ತಮ ಬಾಂಧವ್ಯ ಹೊಂದಿದ್ದವು. ಆದರೆ ಇತ್ತೀಚೆಗೆ ಗಡಿ ವಿವಾದ ಸಂಬಂಧ ಉಭಯ ರಾಷ್ಟ್ರಗಳು ಮನಸ್ತಾಪ ಮೂಡಿದೆ.
ಇನ್ನು ಪ್ರಧಾನಿ ಮೋದಿ ಚೀನಾ ಪ್ರವಾಸ ವೇಳೆ ಹಲವು ಮಹತ್ವದ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಮಾಡುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com