ಬಿಬಿಎಂಪಿ ಚುನಾವಣೆ: ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ರಾಜೀವ್ ಚಂದ್ರಶೇಖರ್

ಬಿಬಿಎಂಪಿಗೆ ತ್ವರಿತವಾಗಿ ಚುನಾವಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದ್ದಾರೆ...
ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್
ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್

ನವದೆಹಲಿ: ಬಿಬಿಎಂಪಿಗೆ ತ್ವರಿತವಾಗಿ ಚುನಾವಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದ್ದಾರೆ.

ಬಿಬಿಎಂಪಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಬಿಬಿಎಂಪಿ ವಿಭಜನೆ ಮತ್ತು ವಿಸರ್ಜನೆ ನೆಪವೊಡ್ಡುತ್ತಿದೆ ಎಂದು ನಾನು ಹೇಳುತ್ತಲೇ ಬಂದಿದ್ದೇನೆ. ಚುನಾವಣೆ ಮುಂದೂಡುವ
ಸರ್ಕಾರದ ನಡೆಯು ಸ್ಥಳೀಯ ಸಂಸ್ಥೆಗಳಿಗೆ ಪ್ರತಿ 5 ವರ್ಷಕ್ಕೊಮ್ಮೆ ಚುನಾವಣೆ ನಡೆಸಿ, ನಾಗರಿಕರಿಗೆ ಸ್ಥಳೀಯ ಸಂಸ್ಥೆಗಳನ್ನು ಆಯ್ಕೆ ಮಾಡುವ ಹಕ್ಕು ನೀಡಿರುವ ಸಂವಿಧಾನದ 243 ವಿಧಿಯ ಆಶಯಕ್ಕೆ ವಿರುದ್ಧವಾಗಿದೆ ಎಂಬುದು ನನ್ನ ನಿಲುವಾಗಿತ್ತು.

ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗ ಈ ಪ್ರಕರಣದಲ್ಲಿ ನಡೆದುಕೊಂಡ ರೀತಿಯಿಂದ ಅನೇಕ ಗಂಭೀರ ಪ್ರಶ್ನೆಗಳು ಎದುರಾಗಿವೆ. ಈ ಎಲ್ಲವುಗಳ ಬಗ್ಗೆ ಕೂಡ ವಿಚಾರಣೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಿದೆ.

ಎಲ್ಲಕ್ಕೂ ಮಿಗಿಲಾಗಿ ಬೆಂಗಳೂರಿನ ನಾಗರಿಕರು ಇನ್ನು ಮೂರು ತಿಂಗಳಲ್ಲಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತಸವಾಗಿದೆ ಎಂದು ಅವರು ಹೇಳಿದ್ದಾರೆ. ಸುಪ್ರೀಂನ ಈ ತೀರ್ಪು ನಮ್ಮ ಬೆಂಗಳೂರು ನಗರಕ್ಕೆ ಮತ್ತು ಲಕ್ಷಾಂತರ ಉತ್ತಮ ನಾಗರಿಕರಿಗೆ ಬದಲಾವಣೆಯ ಹೊಸಪರ್ವಕ್ಕೆ ಮುನ್ನುಡಿಯಾಗಲಿ ಎಂದು ಆಶಿಸುತ್ತೇನೆ.

ಜತೆಗೆ ಬಿಬಿಎಂಪಿಗೆ ಉತ್ತಮ, ಸೇವಾನಿಷ್ಠ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವಂತೆ ಎಲ್ಲ ರಾಜಕೀಯ ಪಕ್ಷ|ಗಳಿಗೂ ಕೋರುತ್ತೇನೆ. ಎಲ್ಲ ನಾಗರಿಕರೂ ನೂತನ ಮತ್ತು ಅರ್ಹರಿಗೆ ಮತದಾನ ಮಾಡಬೇಕೆಂದು ಕೋರುತ್ತೇನೆ. ಎಲ್ಲಾ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಖಚಿತ ಪಡಿಸಿಕೊಳ್ಳಿ, ಬರುವ ಚುನಾವಣೆಯಲ್ಲಿ ನಿಮ್ಮ ಹಕ್ಕು ಚಲಾಯಿಸಿ, ನಿಮ್ಮದನಿಗೆ ಯೋಗ್ಯ ಪ್ರಾತಿನಿಧ್ಯ ಇರುವಂತೆ ನೋಡಿಕೊಳ್ಳಿ ಎಂದು ರಾಜೀವ್ ಚಂದ್ರಶೇಖರ್ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com