ಮೋದಿ ಸರ್ಕಾರ ಮಾಹಿತಿ ಹಕ್ಕು ಕಾಯ್ದೆ ದುರ್ಬಲಗೊಳಿಸುತ್ತಿದೆ: ಸೋನಿಯಾ

ಎನ್‌ಡಿಎ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಹಿತಿ...
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಎನ್‌ಡಿಎ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇಂದು ಲೋಕಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ನರೇಂದ್ರ ಮೋದಿ ಅವರು ಎಲ್ಲಾ ಅಧಿಕಾರ ತಮ್ಮ ಬಳಿಯೇ ಇರಬೇಕು ಎಂದು ಬಯಸುತ್ತಾರೆ. ಹೀಗಾಗಿಯೇ ಅವರು ಆರ್‌ಟಿಐ ಕಾಯ್ದೆಯನ್ನು ರದ್ದುಗೊಳಿಸಲು ಮುಂದಾಗಿದ್ದಾರೆ ಎಂದರು.

ಪಾರದರ್ಶಕತೆ ವಿಷಯದಲ್ಲಿ ನರೇಂದ್ರ ಮೋದಿ ಅವರು ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದು, ಲೋಕಪಾಲ, ಮುಖ್ಯ ಮಾಹಿತಿ ಆಯುಕ್ತರ ಹಾಗೂ ಕೇಂದ್ರೀಯ ಜಾಗೃತದಳದ ಮುಖ್ಯಸ್ಥರ ಹುದ್ದೆಗಳ ನೇಮಕಗಳನ್ನು ಉದ್ದೇಶಪೂರ್ವಕವಾಗಿಯೇ ಖಾಲಿ ಉಳಿಸಿದ್ದಾರೆ ಎಂದರು.

ಎನ್‌ಡಿಎ ಸರ್ಕಾರ ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಿತ್ತಿದೆ ಎಂದು ಆರೋಪಿಸಿದ ಸೋನಿಯಾ  ಮುಖ್ಯ ಮಾಹಿತಿ ಆಯಕ್ತರ ಸ್ಥಾನ ಕಳೆದ 8 ತಿಂಗಳಿನಿಂದ ಖಾಲಿ ಬಿದ್ದಿದೆ. ಮೂರು ಮಾಹಿತಿ ಆಯಕ್ತರ ಸ್ಥಾನಗಳು ಕಳೆದ ಒಂದು ವರ್ಷದಿಂದ ಭರ್ತಿಯಾಗದೆ ಉಳಿದಿವೆ. ಇದರಿಂದಾಗಿ 39 ಸಾವಿರ ಪ್ರಕರಣಗಳು ವಿಲೇವಾರಿಗೆ ಕಾದು ಕುಳಿತಿವೆ ಎಂದು ಅಂಕಿ–ಅಂಶ ಸಮೇತ ಸದನಕ್ಕೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com