ಮಹಾ ಕೋರ್ಟ್‍ಗೆ ರಾಹುಲ್ ಹಾಜರಿ

ಕ್ರಿಮಿನಲ್ ಮಾನನಷ್ಟ ಪ್ರಕರಣ ಸಂಬಂಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಹಾರಾಷ್ಟ್ರ ಸ್ಥಳೀಯ ಕೋರ್ಟ್ ಗೆ ಹಾಜರಾಗಿದ್ದಾರೆ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ಠಾಣೆ: ಕ್ರಿಮಿನಲ್ ಮಾನನಷ್ಟ ಪ್ರಕರಣ ಸಂಬಂಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಹಾರಾಷ್ಟ್ರ ಸ್ಥಳೀಯ ಕೋರ್ಟ್ ಗೆ ಹಾಜರಾಗಿದ್ದಾರೆ. ಈ ಪ್ರಕರಣದ ಎಲ್ಲ ಆರೋಪಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಆದರೂ ಅವರು ಭೀವಾಂಡಿ ಕೋರ್ಟ್‍ಗೆ ವಿಚಾರಣೆಗೆ ಹಾಜರಾಗಿದ್ದಾರೆ. ನಾನು ನ್ಯಾಯಾಂಗಕ್ಕೆ ಗೌರವ ಸಲ್ಲಿಸುತ್ತೇನೆ. ಹಾಗಾಗಿ ನಾನುಕೋರ್ಟ್‍ಗೆ ಹಾಜರಾಗಿದ್ದೇನೆ ಎಂದು ಅವರು  ತಿಳಿಸಿದ್ದಾರೆ. 2014ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಹುಲ್, ಮಹಾತ್ಮ ಗಾಂಧಿ ಅವರನ್ನು ಕೊಂದಿದ್ದು ಆರ್‍ಎಸ್‍ಎಸ್ ಎಂದು ಆರೋಪಿಸಿದ್ದರು. ಈ ಸಂಬಂಧ ಸಂಘದ ಕಾರ್ಯಕರ್ತ ರಾಜೇಶ್ ಕುಂಟೆ ಅವರು ಭೀವಾಂಡಿ ನ್ಯಾಯಾಲಯದಲ್ಲಿ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com