

ಬರ್ಲಿನ್: ಉತ್ತರ ಸ್ವಿಟ್ಜರ್‌ಲೆಂಡ್‌ನ ಆ್ಯರಾಗುವಾ ಕ್ಯಾಂಟಾನ ಪಟ್ಟಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹಲವು ಜನರು ಸಾವನ್ನಪ್ಪಿರಬಹುದು ಎಂದು ಸ್ವಿಸ್ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು ಪೊಲೀಸರು ಘಟನಾ ಸ್ಥಳದಲ್ಲಿ ಬಿಗಿ ಪಹರೆಯನ್ನು ಹಾಕಿದ್ದಾರೆ. ಯಾರು ಗುಂಡಿನ ದಾಳಿ ನಡೆಸಿದ್ದಾರೆ ಹಾಗೂ ಘಟನೆಯಲ್ಲಿ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಯುವಕರಾಗಿದ್ದು ವಿವಿಧ ಖಾಸಗಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸ್ಥಳೀಯ ಮೂಲಗಳು ತಿಳಿಸಿವೆ.