ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಸುಪ್ರಿಂ ಕೋರ್ಟ್

ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ .......
ಸುಪ್ರಿಂಕೋರ್ಟ್
ಸುಪ್ರಿಂಕೋರ್ಟ್

ನವದೆಹಲಿ: ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಅಪರಾಧ ಪ್ರಕರಣಗಳ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಸುಪ್ರಿಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
2002ರಲ್ಲಿ ಪುಣೆಯಲ್ಲಿ 22 ವರ್ಷದ ಬಿಪಿಓ ಉದ್ಯೋಗಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು ನೀಡುವ ವೇಳೆ ಮುಖ್ಯ ನ್ಯಾಯಮೂರ್ತಿ ಎಚ್.ಎಲ್ ದತ್ತು ನೇತೃತ್ವದ ನ್ಯಾಯಪೀಠ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವತ್ತ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದೆ.
ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಬಗ್ಗೆ ವಿಷಾಧ ವ್ಯಕ್ತ ಪಡಿಸಿದ ಅವರು ಪ್ರಕರಣದ ಗಂಭೀರತೆ ಆಧಾರದ ಮೇಲೆ ಶಿಕ್ಷೆ ಪ್ರಮಾಣ ನಿಗಧಿ ಪಡಿಸಬೇಕು. ಇದರಿಂದ ಅಪರಾಧ ಪ್ರಕರಣಗಳು ಹೆಚ್ಚುವುದಿಲ್ಲ.
ಶಿಕ್ಷೆ ಕಠಿಣವಾಗದೇ ಇದ್ದಲ್ಲಿ ಮತ್ತು ಅಪರಾಧ ಪ್ರಕರಣಗಳು ಹೆಚ್ಚಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಸಮಾಜದ ಸ್ವಾಸ್ಥ್ಯ ಹಾಳಾಗುವುದರ ಜೊತೆಗೆ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಕಳವಳ ವ್ಯಕ್ತ ಪಡಿಸಿದರು.
ನ್ಯಾಯಾಲಯಗಳು ನೀಡುವ ಕಠಿಣ ಸಜೆಯಿಂದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಯಿತು ಎಂದು ಸಮಾಜಕ್ಕೆ ಸಮಾಧಾನ ವಾಗಬೇಕು ಎಂದು ಹೇಳಿದರು. .

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com