ಬಿಹೆಚ್ ಯು ಕ್ಯಾಂಪಸ್
ದೇಶ
ಪಿಎಂ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಆಯುರ್ವೇದ ವೈದ್ಯೆಗೆ ಲೈಂಗಿಕ ಕಿರುಕುಳ
ವಾರಾಣಸಿಯ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯ(ಬಿಎಚ್‍ಯು) ಆವರಣದಲ್ಲಿ ಭಾರತೀಯ ಮೂಲದ ಅಮೆರಿಕನ್ ಮಹಿಳೆ ಲೈಂಗಿಕ ಕಿರುಕುಳಕ್ಕೆ...
ವಾರಾಣಸಿ: ವಾರಾಣಸಿಯ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯ(ಬಿಎಚ್‍ಯು) ಆವರಣದಲ್ಲಿ ಭಾರತೀಯ ಮೂಲದ ಅಮೆರಿಕನ್ ಮಹಿಳೆ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಏ.22ರಂದು ಈ ಘಟನೆ ನಡೆದಿದ್ದು, ಐವರು ಪುರುಷರು ಅತ್ಯಾಚಾರ ನಡೆಸಲು ಯತ್ನಿಸಿದ್ದರು ಎಂದು ಡಾ. ಭಾಸ್ವತಿ ಭಟ್ಟಚಾರ್ಯ ಆರೋಪಿಸಿದ್ದಾರೆ. ಘಟನೆ ನಡೆದ ಕೂಡಲೇ ದೂರು ನೀಡಿದ್ದರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ. 9 ದಿನಗಳ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರ ಕ್ಷೇತ್ರವಾದ ವಾರಾಣಸಿಯಲ್ಲೇ ಪೊಲೀಸರ ಬೇಜವಾಬ್ದಾರಿತನಕ್ಕೆ ಭಾಸ್ವತಿ ಅವರು ಖಂಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ