
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ.
ಪ್ರಯಾಣಿಕರ ಬಸ್ ಲತ್ತಿ ಬೆಲ್ಟ್ ನಿಂದ ಉಧಮ್ ಪುರಕ್ಕೆತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಲ್ಲದೆ ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕವಾಗಿ ಜಿಎಂಸಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಗಾಯಾಳುಗಳ ರಕ್ಷಣೆಗಾಗಿ ಸೇನಾ ಹೆಲಿಕಾಪ್ಟರ್ ಗಳನ್ನು ಕೂಡ ಬಳಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Advertisement