ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಬಸ್ ಮೇಲೆ ಗುಂಡಿನ ದಾಳಿ, 43 ಸಾವು

ಪಾಕಿಸ್ತಾನದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಬುಧವಾರ ಬೆಳಗ್ಗೆ ಖಾಸಗಿ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 16 ಮಹಿಳೆಯರು...
ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಬಸ್ ಮೇಲೆ ಗುಂಡಿನ ದಾಳಿ, 43 ಸಾವು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಬುಧವಾರ ಬೆಳಗ್ಗೆ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 16 ಮಹಿಳೆಯರು ಸೇರಿದಂತೆ 43 ಪ್ರಯಾಣಿಕರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಕರಾಚಿಯ ಸಪೂರ್ ಚೌಕ್ ಬಳಿ ಮೂರು ಬೈಕ್‌ಗಳಲ್ಲಿ ಬಂದ ಆರು ಉಗ್ರರು ಏಕಾಏಕಿ ಬಸ್ಸಿನ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ.

ದಾಳಿಯ ವೇಳೆ ಬಸ್ ನಲ್ಲಿ ಸುಮಾರು 60 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದ್ದು, ಈ ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com