ಉಗ್ರರ ದಾಳಿಯಲ್ಲಿ ಭಾರತದ ಕೈವಾಡ: ಗೂಬೆ ಕೂರಿಸಿದ ಪಾಕ್

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಉಗ್ರರ ದಾಳಿಯಲ್ಲಿ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನದ ಪಾಕಿಸ್ತಾನ ವಿದೇಶಾಂಗ ಕಚೇರಿಯ ಕಾರ್ಯದರ್ಶಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಇಸ್ಲಾಮಾಬಾದ್:  ಪಾಕಿಸ್ತಾನದಲ್ಲಿ ನಡೆಯುತ್ತಿರುವ ಉಗ್ರರ ದಾಳಿಯಲ್ಲಿ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನದ ಪಾಕಿಸ್ತಾನ ವಿದೇಶಾಂಗ ಕಚೇರಿಯ ಕಾರ್ಯದರ್ಶಿ ಐಜಾಜ್ ಅಹ್ಮದ್ ಚೌಧರಿ ಗುರುವಾರ ಹೇಳಿದ್ದಾರೆ.

ಭಾರತದ ರಿಸರ್ಚ್ ಅಂಡ್ ಅನಲೀಸಸ್ ವಿಂಗ್ (RAW) ಪಾಕಿಸ್ತಾನದಲ್ಲಿ ನಡೆಯುತ್ತಿರುವ ಅನೇಕ ಭಯೋತ್ಪಾದಕ ದಾಳಿ ಭಾಗಿಯಾಗಿದೆ. ಭಾರತದ ರಾ ಸಂಸ್ಥೆ ಭಯೋತ್ಪಾದನೆ ಚಟುವಟಿಕೆಗಳಲ್ಲಿ ನಿರತವಾಗಿದೆ. ಭಯೋತ್ಪಾದಕರಿಗೆ ಹಣಕಾಸು ಸೇರಿದಂತೆ ಎಲ್ಲ ರೀತಿಯಿಂದಲೂ ರಾ ಸಂಸ್ಥೆ ಸಹಾಯ ಮಾಡುತ್ತಿದೆ. ಪಾಕಿಸ್ತಾನದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಕುಮ್ಮಕ್ಕು ನೀಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಭಾರತವೇ ಪಾಕಿಸ್ತಾನದಲ್ಲಿ ದಾಳಿ ನಡೆಸುತ್ತಿದ್ದು, ಉಗ್ರರೊಂದಿಗೆ ಕೈಜೋಡಿಸಿದೆ. ಈಗಾಗಲೇ ಪಾಕಿಸ್ತಾನದಲ್ಲಿ ನಡೆದಿರುವ ಅನೇಕ ಉಗ್ರರ ದಾಳಿಯಲ್ಲಿ ಭಾರತದ ಕೈವಾಡವಿದೆ ಎಂದು ಅವರು ಹೇಳಿದ್ದಾರೆಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಭಾರತವೇ ಉಗ್ರರೊಡನೆ ಕೈಜೋಡಿಸಿದ್ದು, ಬೇರೆಯವರ ಮೇಲೆ ಗೂಬೆ ಕೂರಿಸುತ್ತಿದೆ. ಆದ್ದರಿಂದ ಭಾರತದ ರಾ ಸಂಸ್ಥೆ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಪಾಕಿಸ್ತಾನ ಮುಂದಾಗಿದೆ. ಭಾರತ ಉಗ್ರರರಿಗೆ ಪ್ರಚೋದನೆ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com