ಫಿಲಿಪ್ಪಿನ್ಸ್‌ ಶೂ ಕಾರ್ಖಾನೆ ಅಗ್ನಿ ದುರಂತ: 72ಕ್ಕೇರಿದ ಸಾವಿನ ಸಂಖ್ಯೆ

ರಬ್ಬರ್ ಪಾದರಕ್ಷೆಗಳ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 72ಕ್ಕೇರಿಕೆಯಾಗಿದೆ...
ಅಗ್ನಿ ಅವಘಡ
ಅಗ್ನಿ ಅವಘಡ
Updated on: 

ಮನಿಲಾ: ರಬ್ಬರ್ ಪಾದರಕ್ಷೆಗಳ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 72ಕ್ಕೇರಿಕೆಯಾಗಿದೆ.

ಮನಿಲಾದ ರಾಜಧಾನಿ ಫಿಲಿಫೈನ್ಸ್ ನಲ್ಲಿ ಶೂ ತಯಾರಿಕಾ ಕಾರ್ಖಾನೆಯೊಂದು ಬೆಂಕಿಗೆ ಆಹುತಿಯಾಗಿದ್ದು, 72 ಮಂದಿ ಸಜೀವ ದಹನವಾದ ದಾರುಣ ಘಟನೆ ಗುರುವಾರ ನಡೆದಿದ್ದು, ಅವಘಡಕ್ಕೆ ಕಾರಣರಾದವ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಿ ಎಂದು ಗಾಯಾಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಖಾನೆಯಲ್ಲಿ ಬೆಂಕಿ ನಿರೋಧಕಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಇಲ್ಲದೇ ಇದ್ದುದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಖಾನೆಯ ಎರಡು ಮಹಡಿ ಕಟ್ಟಡಕ್ಕೆ ಬೆಂಕಿ ಬಿದ್ದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆತಂಕಕ್ಕೀಡಾದ ಕಾರ್ಮಿಕರು ಹೊರಬರಲು ಸಾಧ್ಯವಾಗದೆ, ದಟ್ಟ ಹೊಗೆಯಿಂದಾಗಿ ಉಸಿರಾಟಕ್ಕೆ ತೊಂದರೆಯುಂಟಾಗಿ ಮೃತರಾಗಿದ್ದಾರೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವಾ ದಳದ ಸಿಬ್ಬಂದಿ ತಿಳಿಸಿದ್ದಾರೆ.

ದುರಂತದಲ್ಲಿ ಮಡಿದವರ ಕೆಲವು ಶವಗಳನ್ನು ಹೊರ ತೆಗೆಯಲಾಗಿದ್ದು, ಉಳಿದಂತೆ ಹಲವರ ಶವಗಳು ಸಂಪೂರ್ಣ ಭಸ್ಮವಾಗಿವೆ. ಇನ್ನು ಕೆಲ ಶವಗಳ ತಲೆ ಬುರುಡೆ ಮತ್ತು ಕೆಲವು ಮೂಳೆಗಳು ಮಾತ್ರ ಲಭ್ಯವಾಗಿವೆ. ಒಟ್ಟು 72 ಮಂದಿ ಸಾವಿಗೀಡಾಗಿದ್ದಾರೆ ಎಂದು ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಲಿಯೊನಾರ್ಡೊ ಎಸ್ಪೈನ ಅವರು ತಿಳಿಸಿದ್ದಾರೆ.

ಸ್ಥಳೀಯ ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಗೆ ಪಾದರಕ್ಷೆಗಳನ್ನು ಮಾರಾಟ ಮಾಡುವ ಮೂಲಕ ಕಾರ್ಖಾನೆ ಹೆಸರು ಗಳಿಸಿತ್ತು. ಜತೆಗೆ, ‘ಹವನ’ ಬ್ರಾಂಡ್ ನೊಂದಿಗೆ ವಿಶ್ವ ಮಾರುಕಟ್ಟೆಯಲ್ಲೂ ಗುರುತಿಸಿಕೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com