ಮೇ 22ಕ್ಕೆ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಾ ಪ್ರಮಾಣ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಮೇ 22ಕ್ಕೆ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ....
ಜಯಲಲಿತಾ
ಜಯಲಲಿತಾ

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಮೇ 22ಕ್ಕೆ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೇ 22ರಂದು ಬೆಳಗ್ಗೆ 7ಗಂಟೆಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಜಯಲಲಿತಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗುತ್ತದೆ. ಬಳಿಕ ಮುಖ್ಯಮಂತ್ರಿ ಓ ಪನ್ನೀರ್ ಸೇಲ್ವಂ ಅವರು ರಾಜ್ಯಪಾಲ ಕೆ.ರೋಶಯ್ಯ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ. ಇದೇ ವೇಳೆ ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಜಯಲಲಿತಾ ಅವರನ್ನು ಆಯ್ಕೆ ಮಾಡಿರುವ ಮಾಹಿತಿಯನ್ನು ಪನ್ನೀರ್ ಸೇಲ್ವಂ ಅವರು ರಾಜ್ಯಪಾಲರಿಗೆ ತಿಳಿಸಲಿದ್ದಾರೆ. ನಂತರ ರಾಜ್ಯಪಾಲರು ಜಯಲಲಿತಾ ಅವರಿಗೆ ನೂತನ ಸರ್ಕಾರ ರಚನೆಗೆ ಆಹ್ವಾನ ನೀಡಲಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ ಮೇ 22ರಂದೇ ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಕಳೆದ ಸೆಪ್ಟೆಂಬರ್ 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರು ದೋಷಿ ಎಂದು ಬೆಂಗಳೂರು ಸೆಷೆನ್ಸ್ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆದರೆ ಮೇ 11ರಂದು ಕರ್ನಾಟಕ ಹೈಕೋರ್ಟ್ ಸೆಷೆನ್ಸ್ ಕೋರ್ಟ್ ತೀರ್ಪು ರದ್ದುಗೊಳಿಸಿ, ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿದೆ. ಹೀಗಾಗಿ ಜಯಾ ಮತ್ತೆ ಸಿಎಂ ಆಗುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com