ನರೇಂದ್ರ ಮೋದಿ
ದೇಶ
ಭೂಸ್ವಾಧೀನ ವಿಧೇಯಕ: ಮತ್ತೆ ಸುಗ್ರೀವಾಜ್ಞೆ
ವಿವಾದಾತ್ಮಕ ಭೂಸ್ವಾಧೀನ ವಿಧೇಯಕಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತೊಮ್ಮೆ ಸುಗ್ರೀವಾಜ್ಞೆ ಹೊರಡಿಸಲಿದೆ...
ನವದೆಹಲಿ: ವಿವಾದಾತ್ಮಕ ಭೂಸ್ವಾಧೀನ ವಿಧೇಯಕಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತೊಮ್ಮೆ ಸುಗ್ರೀವಾಜ್ಞೆ ಹೊರಡಿಸಲಿದೆ.
ಪ್ರತಿಪಕ್ಷಗಳ ವಿರೋಧದಿಂದಾಗಿ ಕೇಂದ್ರ ಸರ್ಕಾರ ಈ ವಿಧೇಯಕಕ್ಕೆ ಬಜೆಟ್ ಅಧಿವೇಶನದಲ್ಲಿ ಒಪ್ಪಿಗೆ ಪಡೆಯುವಲ್ಲಿ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ವಿಧೇಯಕವನ್ನು ಜಂಟಿ ಸದನ ಸಮಿತಿಗೆ ಒಪ್ಪಿಸಲಾಗಿದೆ. ಈ ಸಮಿತಿ ಹಳೆಯ ಕಾಯ್ದೆಗೆ ತರಲಾದ ಹೊಸ 9 ತಿದ್ದುಪಡಿಗಳ ಕುರಿತು ಪರಿಶೀಲನೆ ನಡೆಸಲಿದೆ. ಹಾಗಾಗಿ ಸರ್ಕಾರಕ್ಕೆ ಅವಧಿಯೊಳಗೆ ಹಳೆಯ ಸುಗ್ರೀವಾಜ್ಞೆಗೆ ಸಂಸತ್ತಿಗೆ ಒಪ್ಪಿಗೆ ಪಡೆಯುವುದು ಸಾಧ್ಯವಾಗದ ಹಿನ್ನೆಲೆಯಲ್ಲಿ ಮೇ 31ರೊಳಗೆ ಮತ್ತೊಮ್ಮೆ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದೆ.
ಈ ಸಂಬಂಧ ಪ್ರಧಾನಿ ಮೋದಿ ಅವರು ಚೀನಾದಿಂದ ವಾಪಸಾದ ಬೆನ್ನಲ್ಲೇ ಕೇಂದ್ರ ಸಚಿವ ಸಂಪುಟ ನಡೆಯಲಿದ್ದು, ಮರು ಸುಗ್ರೀವಾಜ್ಞೆ ಹೊರಡಿಸುವ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಚೌಧರಿ ಬಿರೇಂದ್ರ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ