
ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ `ಸಾರ್ವಜನಿಕ ಆರೋಗ್ಯ ಕೇಂದ್ರಗಳಿಗೆ ಸ್ವಚ್ಛತಾ ಮಾರ್ಗ ಸೂಚಿ'ಗಳನ್ನು ಬಿಡುಗಡೆಗೊಳಿಸಿದೆ. ಈ ನಿಟ್ಟಿನಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ತ್ಯಾಜ್ಯ ನಿರ್ವಹಣಾ ಯೋಜನೆ ರೂಪಿಸುವ ಅವಶ್ಯಕತೆಯಿದೆ.
ಜೈವಿಕ ವೈದ್ಯಕೀಯ ತ್ಯಾಜ್ಯ ಕಾನೂನು 1998ರ ಅನ್ವಯ ಸರ್ಕಾರಿ ಆಸ್ಪತ್ರೆಗಳು ತ್ಯಾಜ್ಯದ ಸಂಗ್ರಹ ಮತ್ತು ವಿಲೇವಾರಿ ನಡೆಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಆದೇಶಿಸಿದೆ.
ವಿಸ್ಮೃತವಾಗಿರುವ `ಆಸ್ಪತ್ರೆ ತ್ಯಾಜ್ಯ ನಿರ್ವಹಣಾ ಯೋಜನೆ' ಕಾರ್ಯಕ್ಕೆ ಬರುವ ಮುನ್ನ ನೋಡಲ್ ಅಧಿಕಾರಿಯಿಂದ ಒಪ್ಪಿಗೆ ಪಡೆದಿರಬೇಕು. ತ್ಯಾಜ್ಯ ವಿಲೇವಾರಿಯಿಂದ ಜನರ ಆರೋಗ್ಯ ಹಾಗೂ ಪರಿಸರಕ್ಕೆ ಹಾನಿಯಾಗುವಂತಿರಬಾರದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಸ್ವಚ್ಛತಾ ಮಾರ್ಗಸೂಚಿಯು ಆಸ್ಪತ್ರೆಗಳಲ್ಲಿ ತ್ಯಾಜ್ಯದ ನಿರ್ವಹಣೆ ಹಾಗೂ ವಿಲೇವಾರಿಯನ್ನು ಯಾವ ರೀತಿಯಲ್ಲಿ ಮಾಡಬೇಕೆಂಬುದನ್ನು ವಿವರವಾಗಿ ತಿಳಿಸಲಾಗಿದೆ. ಸ್ವಚ್ಛತೆ ಕಾಯ್ದುಕೊಳ್ಳುವ ಪ್ರತಿ ರಾಜ್ಯದ ಎರಡು ಜಿಲ್ಲಾಸ್ಪತ್ರೆಗಳಿಗೆ ಬಹುಮಾನವನ್ನು ನೀಡುವ ಯೋಜನೆಯನ್ನು ಕೂಡ ಕೇಂದ್ರ ಆರೋಗ್ಯ ಸಚಿವಾಲಯ ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಗಳಿಗೆ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.
Advertisement