ಗೋಹತ್ಯೆ ನಿಷೇಧ: ಮೂವರ ಬಂಧನ

ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಅಡ್ಡೆ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ಮಾಡಿದ್ದು, ಎನ್ ಸಿಪಿ ನಾಯಕ ಗಣೇಶ್ ನಾಯಕ್ ಅವರ ವಾಹನ ಚಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಂಬೈ: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಅಡ್ಡೆ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ಮಾಡಿದ್ದು, ಎನ್ ಸಿಪಿ ನಾಯಕ ಗಣೇಶ್ ನಾಯ್ಕ್ ಅವರ ವಾಹನ ಚಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ.

ಮುಂಬೈನ ಕೋಪರ್ ಖಾನೆ ಪ್ರದೇಶದಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಎನ್ ಸಿಪಿ ನಾಯಕ ಗಣೇಶ್ ನಾಯ್ಕ್ ಅವರ ವಾಹನ ಚಾಲಕ ಸೇರಿದಂತೆ ಅವರ ಜೊತೆಯಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಪರ-ವಿರೋಧದ ನಡುವೆಯೂ ಮಹಾರಾಷ್ಟ್ರ ಸರ್ಕಾರ ಮಾರ್ಚ್ 3 ರಂದು ಮಹಾರಾಷ್ಟ್ರ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡುವವರ ವಿರುದ್ಧ ನಿಷೇಧ ಹೇರಿತ್ತು. ಕಾಯ್ದೆ ಪ್ರಕಾರ ಗೋ ಮಾಂಸ ಮಾರಾಟ ಮಾಡುವವರ ವಿರುದ್ಧ 5 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ತೆರುವಂತೆ ಮಹಾರಾಷ್ಟ್ರ ಸರ್ಕಾರ ಗೋಹತ್ಯೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಂಡಿತ್ತು.

ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರಕ್ಕೆ ವಿರುದ್ಧ ಹಲವು ರಾಜಕೀಯ ಪಕ್ಷದ ನಾಯಕರು ಹಾಗೂ ಸಾರ್ವಜನಿಕರು ಪ್ರತಿಭಟನೆಗಳನ್ನು ನಡೆದ್ದವು. ಆಹಾರ ಆಯ್ಕೆಯಲ್ಲಿ ಪ್ರತಿಯೊಬ್ಬರಲ್ಲೂ ವಿಭಿನ್ನತೆ ಇರುತ್ತದೆ. ಈ ರೀತಿಯ ನಿಷೇಧದಿಂದ ಜನರ ಆಹಾರ ಪದ್ಧತಿಯ ಮೇಲೆ ಹೊಡೆತ ಬೀಳಲಿದೆ ಎಂದು ವಿರೋಧ ವ್ಯಕ್ತಪಡಿಸಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com