ಸಿಎಂ ಗಾದಿಗೇರಲು ಜಯಲಲಿತಾ ಸಿದ್ಧತೆ, ಆರ್.ಕೆ ನಗರ ಕ್ಷೇತ್ರದಿಂದ ಸ್ಪರ್ಧೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ನಾಯಕಿ ಜೆ. ಜಯಲಲಿತಾ ಅವರನ್ನು...
ಜೆ. ಜಯಲಲಿತಾ
ಜೆ. ಜಯಲಲಿತಾ

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ನಾಯಕಿ ಜೆ. ಜಯಲಲಿತಾ ಅವರನ್ನು ಕರ್ನಾಟಕ ಹೈಕೋರ್ಟ್ ನಿರ್ದೋಷಿ ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಲು ಜಯಲಲಿತಾ ಸಿದ್ಧತೆ ನಡೆಸಿದ್ದಾರೆ.

ಜಯಲಲಿತಾರ ರಾಜಕೀಯ ರಂಗಪ್ರವೇಶಕ್ಕೆ ವೇದಿಕೆ ಸಜ್ಜಾಗಿದ್ದು, ತಮಿಳುನಾಡಿನ ಡಾ. ರಾಧಾಕೃಷ್ಣ ನಗರ ಕ್ಷೇತ್ರದಿಂದ ಆರಿಸಿ ಬಂದಿದ್ದ ಎಐಎಡಿಎಂಕೆ ಅಭ್ಯರ್ಥಿ ಪಿ. ವೆಟ್ರಿವೇಲು ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಇದೇ ವಿಧಾನಸಭಾ ಕ್ಷೇತ್ರದಿಂದ ಜಯಲಲಿತಾ ಮತ್ತೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಜಯಲಲಿತಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಜಯಲಲಿತಾ ತಮ್ಮ ಶಾಸಕತ್ವ ಸ್ಥಾನವನ್ನು ಕಳೆದುಕೊಂಡಿದ್ದರು.

ಜಯಲಲಿತಾ ಅವರು ಮೇ.22 ಕ್ಕೆ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದರು. ಇದಕ್ಕೂ ಮುನ್ನವೇ ವೆಟ್ರಿವೇಲು ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಜಯಲಲಿತಾರಿಗೆ ಹಾದಿ ಸುಗಮಗೊಳಿಸಿದ್ದಾರೆ.

ರಾಜಿನಾಮೆ ಅಂಗೀಕರಿಸಿದ ಸ್ಪೀಕರ್
ಡಾ. ರಾಧಾಕೃಷ್ಣ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ವೆಟ್ರಿವೇಲು ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ರಾಜಿನಾಮೆಯನ್ನು ಅಂಗೀಕರಿಸಲಾಗಿದೆ ಎಂದು ತಮಿಳುನಾಡು ವಿಧಾನಸಭೆ ಸ್ಪೀಕರ್ ಪಿ. ಧನಪಾಲ್ ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com