

ಸೋನಿಪತ್: ಭಾರತವನ್ನು ಇನ್ನಷ್ಟು ಪ್ರವಾಸಿ ಸ್ನೇಹಿ ರಾಷ್ಟ್ರವನ್ನಾಗಿ ಮಾಡಲು ಹೊಸ ಪ್ರವಾಸೋದ್ಯಮ ನೀತಿಯನ್ನು ಸದ್ಯದಲ್ಲಿಯೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಡಾ.ಮಹೇಶ್ ಶರ್ಮ ತಿಳಿಸಿದ್ದಾರೆ.
ಪ್ರವಾಸೋದ್ಯಮದಿಂದ ನಮ್ಮ ದೇಶಕ್ಕೆ ಆದಾಯ ಬರುವುದಲ್ಲದೆ ಉದ್ಯೋಗಾವಕಾಶವೂ ದೊರೆಯುತ್ತದೆ ಎಂದು ಅವರು ಹೇಳಿದ್ದಾರೆ.
ಪ್ರವಾಸೀ ತಾಣಗಳನ್ನು ಅಭಿವೃದ್ಧಿಪಡಿಸಿ ಪ್ರವಾಸೋದ್ಯಮವನ್ನು ಬೆಳೆಸಲು ರಾಜ್ಯ ಸರ್ಕಾರಗಳ ಸಹಕಾರ ಕೋರಲಾಗುವುದು. ಪ್ರವಾಸೋದ್ಯಮವನ್ನು ಬೆಳೆಸಿದರೆ ನಮ್ಮ ದೇಶದ ಸಾಂಸ್ಕ್ರತಿಕ ಪರಂಪರೆಯೂ ರಕ್ಷಿಸಲ್ಪಡುತ್ತದೆ ಎಂದು ಅವರು ಹೇಳಿದ್ದಾರೆ.