ಕತ್ತು ಸೀಳಿದ ಸ್ಥಿತಿಯಲ್ಲಿ ಮಾಡೆಲ್ ಶಿಖಾ ಜೋಶಿ ಶವ ಪತ್ತೆ

ರೂಪದರ್ಶಿ ಶಿಖಾ ಜೋಶಿ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕತ್ತು ಸೀಳಿರುವ ಸ್ಥಿತಿಯಲ್ಲಿ ಅವರ ಮೃತದೇಹ ಅಂಧೇರಿ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿದೆ...
ರೂಪದರ್ಶಿ ಶಿಖಾ ಜೋಶಿ
ರೂಪದರ್ಶಿ ಶಿಖಾ ಜೋಶಿ
Updated on: 

ಮುಂಬೈ: ರೂಪದರ್ಶಿ ಶಿಖಾ ಜೋಶಿ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕತ್ತು ಸೀಳಿರುವ ಸ್ಥಿತಿಯಲ್ಲಿ ಅವರ ಮೃತದೇಹ ಅಂಧೇರಿ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿದೆ.

30 ವರ್ಷದ ಮಾಡೆಲ್ ಶಿಖಾ ಜೋಶಿ ಅಂಧೇರಿಯ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಇಂದು ಅವರ ಶವ ಪತ್ತೆಯಾಗಿದ್ದು, ಕಳೆದ ರಾತ್ರಿಯೇ ನಟಿ ಮೃತಪಟ್ಟಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

ಕತ್ತು ಸೀಳಿರುವ ಸ್ಥಿತಿಯಲ್ಲಿ ಶಿಖಾ ಜೋಶಿ ಶವ ಪತ್ತೆಯಾಗಿರುವುದರಿಂದ ಇದು  ಕೊಲೆಯೋ, ಆತ್ಮಹತ್ಯೆಯೋ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ಕಡೆ ಪರಿಚಯಸ್ಥರೇ ಅವರ ಕತ್ತು ಸೀಳಿ ಕೊಲೆ ಮಾಡಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಅಂಧೇರಿಯ ಪೊಲೀಸ್ ಅಧಿಕಾರಿಗಳು ಶಿಖಾ ಜೋಶಿ ಅವರ ಸಾವಿನ ಬಗ್ಗೆ ತನಿಖೆ ಕೈಗೊಂಡಿದ್ದು, ಅಪಾರ್ಟ್ ಮೆಂಟ್ ಹಾಗೂ ಸುತ್ತಮುತ್ತಲಿನ ಸಿಸಿಟಿವಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com