ಅರವಿಂದ್ ಕೇಜ್ರಿವಾಲ್
ದೇಶ
ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ: ರಾಷ್ಟ್ರಪತಿ ಭೇಟಿ ಮಾಡಿದ ಕೇಜ್ರಿವಾಲ್
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ
ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ರು.
ಭೇಟಿಯ ವೇಳೆ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದ್ದಾರೆ. ನಜೀಬ್ ಜಂಗ್ ಸರ್ಕಾರದ ಕಾರ್ಯದರ್ಶಿಗಳ ನೇಮಕದಲ್ಲಿ ಮೂಗು ತೂರಿಸುತ್ತಿದ್ದಾರೆ. ದೆಹಲಿ ಆಡಳಿತವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಪ್ರಣಬ್ ಮುಖರ್ಜಿ ಅವರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ದೆಹಲಿಯ ರೈಸಿನಾ ಹಿಲ್ ನಲ್ಲಿ ರಾಷ್ಟ್ರಪತಿಗಳ ಭೇಟಿ ನಂತರ ಮಾಧ್ಯಮಗಳ1ೊಂದಿಗೆ ಮಾತನಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸರ್ಕಾರಕ್ಕೆ ಸಂಬಂಧಪಟ್ಟಿ ಹಲವು ಮಹತ್ವದ ವಿಷಯಗಳನ್ನು ಪ್ರಣಬ್ ಮುಖರ್ಜಿ ಅವರಿಗೆ ವಿವರಿಸಿರುವುದಾಗಿ ಹೇಳಿದ್ದಾರೆ.
ಮುಖ್ಯಮಂತ್ರಿ ಹಾಗೂ ಸಚಿವರ ಗಮನಕ್ಕೆ ತರದೇ ಅಧಿಕಾರಿಗಳನ್ನು ನೇಮಿಸುತ್ತಿರುವುದರ ಬಗ್ಗೆಯೂ ರಾಷ್ಟ್ರಪತಿಗಳ ಗಮನಕ್ಕೆ ತಂದಿರುವುದಾಗಿ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ