ದೆಹಲಿ ಸರ್ಕಾರಿ ಅಧಿಕಾರಿಗಳಿಗೆ ಕಿರುಕುಳದ ಭಯ, ಕೇಜ್ರಿವಾಲ್ ಕೈಕೆಳಗೆ ಕೆಲಸ ಇಷ್ಟವಿಲ್ಲ: ವರದಿ

ಒಂದು ಕಡೆ ಅಧಿಕಾರಿಗಳ ನೇಮಕ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಒಂದು ಕಡೆ ಅಧಿಕಾರಿಗಳ ನೇಮಕ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಜಂಗೀಕುಸ್ತಿ ನಡೆಯುತ್ತಿದೆ. ಮತ್ತೊಂದು ಕಡೆ ದೆಹಲಿ ಸರ್ಕಾರ ಹಲವು ಅಧಿಕಾರಿಗಳು ದೆಹಲಿ ಸಿಎಂ ಕೇಜ್ರಿವಾಲ್ ಅವರ ಕೈಕೆಳಗೆ ಕೆಲಸ ಮಾಡಲು ತಮಗೆ ಇಷ್ಟವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಒಂದು ವೇಳೆ ದೆಹಲಿ ಸಿಎಂ ವಿರುದ್ಧ ತಾವು ಪ್ರತಿಭಟಿಸಿದರೆ, ಕಿರುಕುಳಕ್ಕೆ ಒಳಗಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಶಕುಂತಲಾ ಗ್ಯಾಮ್ಲಿನ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು ಹಂಗಾಮಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದರು. ಇದು ಗವರ್ನರ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ನಡುವೆ ಜಂಗೀಕುಸ್ತಿಗೆ ಕಾರಣವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com