ರಿಟರ್ನ್ಸ್ ವೇಳೆ ಕಂಪನಿ ಪ್ರವಾಸ ವಿವರ ಬೇಕಿಲ್ಲ

ಕಂಪನಿ ಪ್ರಾಯೋಜಿತ ವಿದೇಶಿ ಪ್ರವಾಸದ ಮಾಹಿತಿಯನ್ನು ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್ ಫಾರಂನಲ್ಲಿ ಕಡ್ಡಾಯವಾಗಿ ಬಹಿರಂಗಪಡಿಸಬೇಕೆನ್ನುವ ಪ್ರಸ್ತಾಪವನ್ನು ಸರ್ಕಾರ ಹಿಂಪಡೆಯುವ ನಿರೀಕ್ಷೆ...
ವಿತ್ತ ಸಚಿವ ಅರುಣ್ ಜೇಟ್ಲಿ
ವಿತ್ತ ಸಚಿವ ಅರುಣ್ ಜೇಟ್ಲಿ

ನವದೆಹಲಿ: ಕಂಪನಿ ಪ್ರಾಯೋಜಿತ ವಿದೇಶಿ ಪ್ರವಾಸದ ಮಾಹಿತಿಯನ್ನು ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್ ಫಾರಂನಲ್ಲಿ ಕಡ್ಡಾಯವಾಗಿ ಬಹಿರಂಗಪಡಿಸಬೇಕೆನ್ನುವ ಪ್ರಸ್ತಾಪವನ್ನು ಸರ್ಕಾರ ಹಿಂಪಡೆಯುವ ನಿರೀಕ್ಷೆ ಇದೆ. ಆದರೆ, ಬ್ಯಾಂಕ್‍ಗಳಲ್ಲಿ ಹೊಂದಿರುವ ಖಾತೆ ಹಾಗೂ ಅದರಲ್ಲಿ ಇರುವ ಹಣವನ್ನು ಬಹಿರಂಗಪಡಿಸುವುದು ಕಡ್ಡಾಯ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಈ ಹಿಂದೆ ಹೊರತರಲಾಗಿದ್ದ ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್ ಫಾರಂಗೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಸರಳ ಹಾಗೂ ಸುಲಭವಾಗಿ ಭರ್ತಿ ಮಾಡಬಹುದಾದ ಅರ್ಜಿ ಹೊರತರಲು ಉದ್ದೇಶಿಸಿದೆ.

ವಿದೇಶಿ ಪ್ರವಾಸಕ್ಕೆ ಸಂಬಂಧಿಸಿ ಕಂಪನಿ ಪ್ರಾಯೋಜಿತ ಪ್ರವಾಸದ ಮಾಹಿತಿ ಬಹಿರಂಗಪಡಿಸಬೇಕೆಂದಿಲ್ಲ. ಆದರೆ, ವೈಯಕ್ತಿಕ ಪ್ರವಾಸ ವೆಚ್ಚವು ನಿಗದಿತ ಮಿತಿಗಿಂತ ಹೆಚ್ಚಿದ್ದರೆ ಆ ಕುರಿತ ಮಾಹಿತಿ ಬಹಿರಂಗಪಡಿಸುವುದು ಕಡ್ಡಾಯವಾಗುವ ಸಾಧ್ಯತೆ ಇದೆ. ಅಂತಿಮ ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್ ಫಾರಂ ಕುರಿತು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಂಗಳಾಂತ್ಯದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com