ದೆಹಲಿ, ಮುಂಬೈನಲ್ಲಿ ತೆರಿಗೆ ಇಲಾಖೆ ಕೇಂದ್ರಗಳು!

ಕಪ್ಪುಹಣಕ್ಕೆ ಸಂಬಂಧಿಸಿ ಹೊಸ ಕಾನೂನು ಹಿನ್ನೆಲೆಯಲ್ಲಿ ವಿದೇಶಿ ಬ್ಯಾಂಕ್‍ಗಳಲ್ಲಿ ಖಾತೆ ಹೊಂದಿರುವ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯು ದೆಹಲಿ ಮತ್ತು ಮುಂಬೈನಲ್ಲಿ ಎರಡು ವಿಶೇಷ ಕೇಂದ್ರಗಳನ್ನು...
ಆದಾಯ ತೆರಿಗೆ ಇಲಾಖೆ ( ಸಂಗ್ರಹ ಚಿತ್ರ)
ಆದಾಯ ತೆರಿಗೆ ಇಲಾಖೆ ( ಸಂಗ್ರಹ ಚಿತ್ರ)

ನವದೆಹಲಿ: ಕಪ್ಪುಹಣಕ್ಕೆ ಸಂಬಂಧಿಸಿ ಹೊಸ ಕಾನೂನು ಹಿನ್ನೆಲೆಯಲ್ಲಿ ವಿದೇಶಿ ಬ್ಯಾಂಕ್‍ಗಳಲ್ಲಿ ಖಾತೆ ಹೊಂದಿರುವ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯು ದೆಹಲಿ ಮತ್ತು ಮುಂಬೈನಲ್ಲಿ ಎರಡು ವಿಶೇಷ ಕೇಂದ್ರಗಳನ್ನು ತೆರೆಯಲು ನಿರ್ಧರಿಸಿದೆ.

ವಿದೇಶಿ ಬ್ಯಾಂಕ್‍ಗಳಲ್ಲಿರುವ ಖಾತೆ, ಆಸ್ತಿ ಮಾಹಿತಿ ಸ್ವೀಕೃತಿ ಮತ್ತು ಘೋಷಣೆಗೆ ಸಂಬಂಧಿಸಿ ಪ್ರಕ್ರಿಯೆಗಳನ್ನು ನೋಡಿಕೊಳ್ಳಲು ಈ ಕೇಂದ್ರಗಳಲ್ಲಿ ಹಿರಿಯ ಅಧಿಕಾರಿಗಳನ್ನೇ ನೇಮಿಸಲಾಗುತ್ತದೆ. ಮಾಹಿತಿ ಬಹಿರಂಗಪಡಿಸಲುದ್ದೇಶಿಸಿರುವವರಿಗೆ ಯಾವುದೇ ಕಿರುಕುಳ ಆಗಬಾರದು ಎನ್ನುವ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com