
ಮುಂಬೈ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸರುವ ಮಿತ್ರ ಪಕ್ಷ ಶಿವಸೇನೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗೋಲಿಯಾಗೆ 1 ಬಿಲಿಯನ್ ಡಾಲರ್ ನೆರವು ಘೋಷಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ತನ್ನ ಮುಖವಾಣಿ 'ಸಾಮ್ನಾ'ದಲ್ಲಿ ಮೋದಿ ನಡೆಯನ್ನು ಕಟುವಾಗಿ ಟೀಕಿಸಿರುವ ಶಿವಸೇನೆ, ಮಹಾರಾಷ್ಟ್ರಕ್ಕಿಂತ ಮಂಗೋಲಿಯಾ ಅದೃಷ್ಟಶಾಲಿ ದೇಶ ಎಂದು ವ್ಯಂಗ್ಯವಾಡಿದೆ.
ಭಾರತದಲ್ಲೇ ಬಗೆಹರಿಸಬೇಕಾಗಿರುವ ಸಾಕಷ್ಟು ಸಮಸ್ಯೆಗಳಿವೆ. ಅಕಾಲಿಕ ಮಳೆಯಿಂದಾಗಿ ಮಹಾರಾಷ್ಟ್ರದಲ್ಲಿ ಹಲವು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ತಲೆ ಕೆಡಿಸಿಕೊಂಡಿಲ್ಲ ಎಂದಿರುವ ಶಿವಸೇನೆ, ಮೊದಲ ನಮ್ಮ ದೇಶದ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ತೆಲೆ ಕೆಡಿಸಿಕೊಳ್ಳಿ. ಮಹಾರಾಷ್ಟ್ರದ ರೈತರಿಗೆ ನೆರವು ನೀಡಿ ಎಂದು ಒತ್ತಾಯಿಸಿದೆ.
ಚೀನಾ ಪ್ರವಾಸದ ಬಳಿಕ ಮಂಗೋಲಿಯಾ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಅಭಿವೃದ್ಧಿಗಾಗಿ 1 ಬಿಲಿಯನ್ ಡಾಲರ್ ನೆರವು ಘೋಷಿಸಿದ್ದರು.
Advertisement