ವಿಧಾನ ಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ : ಮಾಂಝಿ

ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೇ 243 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ .....
ಜಿತನ್ ರಾಮ್ ಮಾಂಝಿ
ಜಿತನ್ ರಾಮ್ ಮಾಂಝಿ

ಪಾಟ್ನಾ: ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೇ 243 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಸ್ಪಷ್ಟ ಪಡಿಸಿದ್ದಾರೆ.

ವಿಧಾನ ಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳದೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ನೀಡಿದ್ದ ಆಹ್ವಾನವನ್ನು ತಿರಸ್ಕರಿಸಿರುವ ಮಾಂಝಿ, ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೇ,  ತಮ್ಮ ನೂತನ ಪಕ್ಷ ಹಿಂದೂಸ್ತಾನಿ ಆವಂ ಮೋರ್ಚಾದಿಂದ ಬಿಹಾರದ 243 ಕ್ಷೇತ್ರಗಳಲ್ಲಿ  ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಜಿತನ್ ರಾಮ್ ಮಾಂಝಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆಂಬ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಲಾಲು ಪ್ರಸಾದ್ ಯಾದವ್ ಆರ್ ಜೆಡಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಆಹ್ವಾನಿಸಿದ್ದರು.  ಸಿಎಂ ಸ್ಥಾನವದಿಂದ ಮಾಂಝಿಯನ್ನು ಪದಚ್ಯುತಗೊಳಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಮಾಂಝಿ ಗೆ ಲಾಲೂ ಪ್ರಸಾದ್ ಆಹ್ವಾನದ ಬಗ್ಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com