ದೇಶ

ಜಯಲಲಿತಾ, 28 ಸಚಿವರ ಪ್ರಮಾಣವಚನ ನಾಳೆ

ಜಯಲಲಿತಾ, 28 ಸಚಿವರ ಪ್ರಮಾಣವಚನ ನಾಳೆ
ಕೆ. ರೋಸಯ್ಯ ಮತ್ತು ಜಯಲಲಿತಾ
Published On :

ಚೆನ್ನೈ: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಆರೋಪ ಮುಕ್ತರಾಗಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ. ಜಯಲಲಿತಾ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಬೆಳಗ್ಗೆ ನಡೆದ ಎಐಎಡಿಎಂಕೆ ಪ್ರಧಾನ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಜಯಲಲಿತಾರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಜಯಲಲಿತಾರೊಂದಿಗೆ ಪಕ್ಷದ 28 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನಗರದ ಮದ್ರಾಸ್ ವಿಶ್ವವಿದ್ಯಾಲಯ ಆಡಿಟೋರಿಯಂನಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸಮಾರಂಭ ನಡೆಯಲಿದೆ. ನೂತನ ಸಚಿವ ಸಂಪುಟದಲ್ಲಿ ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರಿಗೆ ಪ್ರಮುಖ ಖಾತೆ ಸಿಗುವ ಸಾಧ್ಯತೆಗಳಿವೆ.

ಶಾಸಕಾಂಗ ಪಕ್ಷದ ಸಭೆಯ ಬಳಿಕ ಸಿಎಂ ಓ ಪನ್ನೀರ್ ಸೇಲ್ವಂ ನೇತೃತ್ವದಲ್ಲಿ ಸಂಪುಟದ ಎಲ್ಲಾ ಸಚಿವರು ರಾಜ್ಯಪಾಲ ಕೆ.ರೋಸಯ್ಯ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಸಿದರು. ರಾಜಿನಾಮೆ ಅಂಗೀಕರಿಸಿದ ರಾಜ್ಯಪಾಲರು, ನೂತನ ಸರ್ಕಾರ ರಚಿಸುವಂತೆ ಜಯಲಲಿತಾ ಅವರಿಗೆ ಆಹ್ವಾನ ನೀಡಿದ್ದರು.

ಕಳೆದ ಸೆಪ್ಟೆಂಬರ್ 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರು ದೋಷಿ ಎಂದು ಬೆಂಗಳೂರು ಸೆಷೆನ್ಸ್ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆದರೆ ಮೇ 11ರಂದು ಕರ್ನಾಟಕ ಹೈಕೋರ್ಟ್ ಸೆಷೆನ್ಸ್ ಕೋರ್ಟ್ ತೀರ್ಪು ರದ್ದುಗೊಳಿಸಿ, ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿದೆ. ಹೀಗಾಗಿ ಜಯಾ ಮತ್ತೆ ಸಿಎಂ ಆಗುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.