

ಚೆನ್ನೈ/ನವದೆಹಲಿ: ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು ಸುಪ್ರೀಂಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ
ಅರ್ಜಿ ಸಲ್ಲಿಸಲಾಗಿದೆ.
ನ್ಯಾಯವಾದಿ ಜಿ.ಎಸ್.ಮಣಿ ಎಂಬುವರು ಈ ಅರ್ಜಿ ಸಲ್ಲಿಸಿದ್ದಾರೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಜಯಲಲಿತಾರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಆದರೆ ಉನ್ನತ ನ್ಯಾಯಾಲಯದಲ್ಲಿ ಆ ಆದೇಶ ದೃಢೀಕರಣಗೊಳ್ಳಬೇಕು. ಅಲ್ಲಿಯ ವರೆಗೆ ಜಯಲಲಿತಾರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ಅವಕಾಶ ನೀಡಬಾರದು ಎಂದು ಮಣಿ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇಂದು ಪ್ರತ್ಯಕ್ಷ
ಇದೇ ವೇಳೆ ಪ್ರಕರಣದಲ್ಲಿ ದೋಷ ಮುಕ್ತಿಗೊಂಡು ಹೈಕೋರ್ಟು ತೀರ್ಪು ನೀಡಿದ ಬಳಿಕ ಮೊದಲ ಬಾರಿಗೆ ಶುಕ್ರವಾರ ಚೆನ್ನೈನಲ್ಲಿ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ. ಇದರ ಜತೆಗೆ ಪಕ್ಷದ ಪ್ರಮುಖ ನಾಯಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. 23ರಂದು ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.