ಸಿಐಸಿ, ಸಿವಿಸಿ ಆಯ್ಕೆ ನಿರ್ಧಾರ ಇಂದು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಶನಿವಾರ ಸಭೆ ಸೇರಲಿದ್ದು, ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಮತ್ತು ಕೇಂದ್ರ ಜಾಗೃತ ಆಯೋಗ...
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಶನಿವಾರ ಸಭೆ ಸೇರಲಿದ್ದು, ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಮತ್ತು ಕೇಂದ್ರ ಜಾಗೃತ ಆಯೋಗ (ಸಿವಿಸಿ)ದ ಮುಖ್ಯಸ್ಥರ ನೇಮಕಕ್ಕೆ ಸಂಬಂಧಿಸಿ ನಿರ್ಧಾರ ಕೈಗೊಳ್ಳಲಿದೆ. ಪ್ರಧಾನಿ ನಿವಾಸದಲ್ಲಿ ಈ ಸಭೆ ನಡೆಯಲಿದೆ.

ಸಭೆಯಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ, ಕಾಂಗ್ರೆಸ್ ಪಕ್ಷದ ಲೋಕಸಭೆಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೇರಿದಂತೆ ಪ್ರಮು ಅಧಿಕಾರಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಮಾಹಿತಿ ಆಯೋಗದ ಅಧ್ಯಕ್ಷರಾಗಿದ್ದ ರಾಜೀವ್ ಮಾಥುರ್ ಅವರ ಅಧಿಕಾರವಧಿ 2014 ಆಗಸ್ಟ್ 22ರಂದು ಅಂತ್ಯಗೊಂಡಿತ್ತು. ಕೇಂದ್ರ ಜಾಗೃತ ಆಯೋಗದ ಮುಖ್ಯಸ್ಥರಾಗಿದ್ದ ಪ್ರದೀಪ್ ಕುಮಾರ್ ಮತ್ತು ವಿಜಿಲೆನ್ಸ್ ಕಮಿಷನರ್ ಜಿಎಂ ಗಾರ್ಗ್ ಅವರ ಅಧಿಕಾರವಧಿ ಕ್ರಮವಾಗಿ ಸೆಪ್ಟೆಂಬರ್ 28 ಮತ್ತು ಸೆಪ್ಟೆಂಬರ್ 7ರಂದು ಕೊನೆಗೊಂಡಿತ್ತು.

ಪ್ರಸ್ತುತ ಈ ಮೂರು ಸ್ಥಾನಗಳಿಗೆ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಭೆ ಸೇರಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com