ಆಂಧ್ರ ಮತ್ತು ತೆಲಂಗಾಣದಲ್ಲಿ ಉಷ್ಣಗಾಳಿಗೆ ಸಾವು:223ಕ್ಕೆ ಏರಿಕೆ

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಇದುವರೆಗೆ ಸಾವಿಗೀಡಾದವರ ಸಂಖ್ಯೆ 223ಕ್ಕೆ ಏರಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹೈದರಾಬಾದ್: ಹೈದಾರಾಬಾದಿನಲ್ಲಿ ಕ್ಷಣ ಕ್ಷಣಕ್ಕೂ ಹವಾಮಾನದಲ್ಲಿ ಉಷ್ಣಾಂಶ ಹೆಚ್ಚುತ್ತಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ ಇತರ ಪ್ರದೇಶಗಳು ಇದಕ್ಕೆ ಹೊರತೇನಲ್ಲ.ಇದುವರೆಗೆ ಸಾವಿಗೀಡಾದವರ ಸಂಖ್ಯೆ 223ಕ್ಕೆ ಏರಿದೆ.

ಶನಿವಾರ ಸಂಜೆ ಸಿಕ್ಕಿದ ಮಾಹಿತಿ ಪ್ರಕಾರ, ತೆಲಂಗಾಣದಲ್ಲಿ 128 ಮಂದಿ ಅಧಿಕ ಉಷ್ಣಾಂಶದಿಂದ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಕಂದಾಯ ಕಾರ್ಯದರ್ಶಿ ಬಿ.ಆರ್ .ಮೀನಾ ತಿಳಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಬಿಸಿಲ ಬೇಗೆಯಿಂದ ತತ್ತರಿಸಿ ಸಾವನ್ನಪ್ಪಿದವರ ಸಂಖ್ಯೆ 95ಕ್ಕೆ ಏರಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com