ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಭೀಕರ ಅಪಘಾತ 11 ಸಾವು

ಮುಂಬೈ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ವರ್ಷದ ಬಾಲಕಿ ಸೇರಿದಂತೆ...
ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಭೀಕರ ಅಪಘಾತ 11 ಸಾವು

ಪಲ್‌ಘರ್: ಮುಂಬೈ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ವರ್ಷದ ಬಾಲಕಿ ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ ಮತ್ತು 17ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಪಲ್ಘರ್‌ನ ತಲಸರಿ ಬಳಿ ಈ ಅಪಘಾತ ಸಂಭವಿಸಿದ್ದು, ಮುಂಬೈಯಿಂದ ಸುರತ್‌ಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲ್ಲರ್‌ವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಎದುರಗಡೆಯಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಮನೋಜ್ ಲಹಂಗೆ ಅವರು ತಿಳಿಸಿದ್ದಾರೆ.

ಅಪಘಾತದಲ್ಲಿ ಆರು ಪುರುಷರು, ನಾಲ್ವರು ಮಹಿಳೆಯರು ಹಾಗೂ ಓರ್ವ ಬಾಲಕಿ ಮೃತಪಟ್ಟಿದ್ದು, ನಾವು ಮೃತಪಟ್ಟವರ ಗುರುತು ಪತ್ತೆ ಹಚ್ಚಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಮನೋಜ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com