ಹಳಿ ತಪ್ಪಿದ ಮುರಿ ಎಕ್ಸ್ ಪ್ರೆಸ್: 4 ಸಾವು, 50 ಮಂದಿಗೆ ಗಾಯ

ಉತ್ತರ ಪ್ರದೇಶದ ಲಖನೌನಲ್ಲಿ ಮುರಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೆ, 50 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ...
ಕೌಶಿಂಬಿ ಜಿಲ್ಲೆಯ ಸಿರತು ಬಳಿ ಹಳಿ ತಪ್ಪಿಬಿದ್ದ ಮುರಿ ಎಕ್ಸ್ ಪ್ರೆಸ್ ನ 8 ಬೋಗಿಗಳು
ಕೌಶಿಂಬಿ ಜಿಲ್ಲೆಯ ಸಿರತು ಬಳಿ ಹಳಿ ತಪ್ಪಿಬಿದ್ದ ಮುರಿ ಎಕ್ಸ್ ಪ್ರೆಸ್ ನ 8 ಬೋಗಿಗಳು

ಲಖನೌ: ಉತ್ತರ ಪ್ರದೇಶದ ಲಖನೌನಲ್ಲಿ ಮುರಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೆ, 50 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮುರಿ ಎಕ್ಸ್ ಪ್ರೆಸ್ ರೈಲು ಟಾಟಾನಗರದಿಂದ ಜಮ್ಮುವಿಗೆ ತೆರಳುತ್ತಿತ್ತು. ಈ ವೇಳೆ ಕೌಶಿಂಬಿ ಜಿಲ್ಲೆಯ ಸಿರತು ಬಳಿ ಬರುತ್ತಿದ್ದಾಗ ಪ್ರಯಾಣಿಕರ ರೈಲಿನ 8 ಬೋಗಿಗಳು ಹಳಿ ತಪ್ಪಿದೆ. ಪರಿಣಾಮ ಬೋಗಿಗಳು ಜಖಂಗೊಂಡಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸುದ್ಧಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ರೈಲ್ವೇ ಅಧಿಕಾರಿಗಳು ಘಟನಾ ಸ್ಥಳವನ್ನು ಪರಿಶೀಲಿಸಿದ್ದು, ಘಟನೆಗೆ ಪ್ರಮುಖ ಕಾರಣ ಏನೆಂದು ಈ ವರೆಗೂ ತಿಳಿದುಬಂದಿಲ್ಲ.

ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಉತ್ತರಪ್ರದೇಶದ ಸರ್ಕಾರ 2 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಣೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com