ಬಿಹಾರ ವಿಧಾನಸಭೆ ಚುನಾವಣೆ-ಮೈತ್ರಿಗೆ ಬಾಗಿಲು ತೆರೆದಿದೆ: ಅಮಿತ್ ಶಾ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಪಕ್ಷ ಸಿದ್ಧವಿದೆ ....
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಪಕ್ಷ ಸಿದ್ಧವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಬಿಹಾರ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಬಿಜೆಪಿ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಪಕ್ಷ ಸಿದ್ಧವಿದೆ ಎಂಬುದನ್ನು  ಅಮಿತ್ ಶಾ ಪರೋಕ್ಷವಾಗಿ ತಿಳಿಸಿದ್ದಾರೆ.

ದೆಹಲಿ ವಿಧಾನ ಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ನಂತರ ಬಿಹಾರ ಚುನಾವಣೆ ಕೇಸರಿ ಪಾಳೆಯಕ್ಕೆ ಕಠಿಣ ಪರೀಕ್ಷೆಯಾಗಿದೆ.  ಇನ್ನು ಬಿಹಾರದಲ್ಲಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತ ಪಡಿಸಿದರು.

ಖಚಿತವಾಗಿ ಇಂಥಹುದ್ದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಹೇಳದ ಅಮಿತ್ ಶಾ ಯಾರೇ ಬಂದರೂ ಮೈತ್ರಿಗೆ ಬಾಗಿಲು ತೆರೆದಿರುವುದಾಗಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com