ಪೊಲೀಸರ ಬಂಧಿಸುವ ಅಧಿಕಾರ ಎಸಿಬಿಗಿದೆ: ದಿಲ್ಲಿ ಕೋರ್ಟ್

ಲೆಫ್ಟಿನೆಂಟ್ ಗವರ್ನರ್ ಜತೆ ಕಾದಾಟಕ್ಕಿಳಿದಿದ್ದ ದೆಹಲಿಯ ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರಕ್ಕೆ ದೆಹಲಿ ಹೈಕೋರ್ಟ್‍ನ ಬೆಂಬಲ ಸಿಕ್ಕಿದೆ...
ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ
ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ
Updated on: 

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಜತೆ ಕಾದಾಟಕ್ಕಿಳಿದಿದ್ದ ದೆಹಲಿಯ ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರಕ್ಕೆ ದೆಹಲಿ ಹೈಕೋರ್ಟ್‍ನ ಬೆಂಬಲ ಸಿಕ್ಕಿದೆ. ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವು ಕೇಜ್ರಿವಾಲ್ ನೇತೃತ್ವದ ಸರ್ಕಾರದ ಆದೇಶ ಪಾಲಿಸಬೇಕೇ ವಿನಾ ಕೇಂದ್ರ ಸರ್ಕಾರದ್ದಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಜತೆಗೆ, ಪೊಲೀಸ್ ಸಿಬ್ಬಂದಿಯನ್ನೂ ಬಂಧಿಸುವ ಅಧಿಕಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಇದೆ ಎಂದಿರುವ ನ್ಯಾಯಾಲಯ, ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಪೊಲೀಸ್ ಹೆಡ್‍ಕಾನ್‍ಸ್ಟೇಬಲ್ ಅನಿಲ್ ಕುಮಾರ್ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ.

ಕಳೆದ ವಾರವಷ್ಟೇ ಲೆ.ಗವರ್ನರ್ ಕರ್ತವ್ಯಗಳ ಬಗ್ಗೆ ಸುತ್ತೋಲೆ ಹೊರಡಿಸಿದ್ದ ಕೇಂದ್ರ ಸರ್ಕಾರ, ಪೊಲೀಸ್ ಅಧಿಕಾರಿ ಗಳನ್ನು ತನಿಖೆ ನಡೆಸುವ ಅಧಿಕಾರ ಎಸಿಬಿಗೆ ಇರುವುದಿಲ್ಲ ಎಂದಿತ್ತು. ಅಲ್ಲದೆ, ಸೇವೆ ಗಳು, ಕಾನೂನು ಸುವ್ಯವಸ್ಥೆ, ಪೊಲೀಸ್, ಭೂಮಿಗೆ ಸಂಬಂಧಿಸಿದ ವಿಚಾರದಲ್ಲಿ ಲೆ.ಗವರ್ನರ್ ಮಾತೇ ಅಂತಿಮ ಎಂದಿತ್ತು.

ಆದರೆ, ಈಗ ಹೈಕೋರ್ಟ್ ಇದಕ್ಕೆ ತದ್ವಿರುದ್ಧವಾಗಿ ಪ್ರತಿಕ್ರಿಯಿಸಿದ್ದು, ಲೆ.ಗವರ್ನರ್ ಅವರು ಕೇಜ್ರಿವಾಲ್ ಸಚಿವ ಸಂಪುಟದ ಸಲಹೆಗಳಿಗೆ ಅನುಗುಣವಾಗಿಯೇ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com