ಅಧಿಕಾರಿಗಳ ನೇಮಕ ವಿವಾದ: ಕೇಂದ್ರದ ಅಧಿಸೂಚನೆ ವಿರುದ್ಧ 'ಹೈ' ಮೆಟ್ಟಿಲೇರಿದ ದೆಹಲಿ ಸರ್ಕಾರ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್‌ಗೆ ಅಧಿಕಾರಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಇದೆ ಎಂದು...
ಅರವಿಂದ ಕೇಜ್ರಿವಾಲ್‌
ಅರವಿಂದ ಕೇಜ್ರಿವಾಲ್‌

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್‌ಗೆ ಅಧಿಕಾರಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಇದೆ ಎಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ವಿರುದ್ಧ ಆಮ್ ಆದ್ಮಿ ಸರ್ಕಾರ ಗುರುವಾರ ಹೈಕೋರ್ಟ್ ಮೆಟ್ಟಿಲೇರಿದೆ.

ಕೇಂದ್ರ ಗೃಹ ಸಚಿವಾಲಯದ ಅಧಿಸೂಚನೆ ವಿರುದ್ಧ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ದೆಹಲಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ಬಿ.ಡಿ.ಅಹ್ಮದ್‌ ಮತ್ತು ನ್ಯಾಯಮೂರ್ತಿ ಸಂಜೀವ್‌ ಸಚ್‌ದೇವ್‌ ಅವರನ್ನೊಳಗೊಂಡ  ನಾಳೆ ಅರ್ಜಿಯ ವಿಚಾರಣೆ ನಡೆಸಲಿದೆ.

ಲೆಫ್ಟಿನೆಂಟ್ ಗವರ್ನರ್ ನಜೀಬ್‌ ಜಂಗ್‌ ಅವರು, ಶಕುಂತಲಾ ಗ್ಯಾಮ್ಲಿನ್‌ ಅವರನ್ನು ದೆಹಲಿ  ಸರ್ಕಾರದ ಪ್ರಭಾರ ಮುಖ್ಯ ಕಾರ್ಯದರ್ಶಿ ಆಗಿ ನೇಮಿಸಿದ್ದರು. ಆದರೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಸರ್ಕಾರದ ಕಾರ್ಯಗಳಲ್ಲಿ ಜಂಗ್‌ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಕೇಜ್ರಿವಾಲ್ ಹಾಗೂ ಜಂಗ್ ನಡುವಿನ ಸಂಘರ್ಷ ಕೇಂದ್ರ ಸರ್ಕಾರ, ರಾಷ್ಟ್ರಪತಿ ಭವನಕ್ಕೂ ಮುಟ್ಟಿತ್ತು. ಈ ಮಧ್ಯೆ, ‘ಅಧಿಕಾರಿಗಳ ನೇಮಕಾತಿ ಹಾಗೂ ವರ್ಗಾವಣೆಯಲ್ಲಿ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌ ಅವರಿಗೆ ವಿವೇಚನಾಧಿಕಾರವಿದೆ’ ಎಂದು ಕೇಂದ್ರ ಗೃಹ ಇಲಾಖೆ ಮೇ 21ರಂದು ಅಧಿಸೂಚನೆ ಹೊರಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com