ಜಮ್ಮು: ಬ್ಯಾಂಕ್ ಎದುರು ಉಗ್ರರ ದಾಳಿ, ಓರ್ವ ಪೊಲೀಸ್ ಗಾಯ

ಶೋಪಿಯಾನ್ ಜಿಲ್ಲೆಯ ಬ್ಯಾಂಕೊಂದರ ಹೊರಾಂಗಣದಲ್ಲಿ ಉಗ್ರರ ಗುಂಪೊಂದು ಪೊಲೀಸರ ಮೇಲೆ ದಾಳಿ ನಡೆಸಿದ್ದು, ಉಗ್ರರ ಗುಂಡಿನ ದಾಳಿಗೆ ಓರ್ವ ಪೊಲೀಸ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು: ಶೋಪಿಯಾನ್ ಜಿಲ್ಲೆಯ ಬ್ಯಾಂಕೊಂದರ ಹೊರಾಂಗಣದಲ್ಲಿ ಉಗ್ರರ ಗುಂಪೊಂದು ಪೊಲೀಸರ ಮೇಲೆ ದಾಳಿ ನಡೆಸಿದ್ದು, ಉಗ್ರರ ಗುಂಡಿನ ದಾಳಿಗೆ ಓರ್ವ ಪೊಲೀಸ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಕಚ್ದೂರ ಬಳಿ ಇರುವ ಜಮ್ಮ ಮತ್ತು ಕಾಶ್ಮೀರ ಬ್ಯಾಂಕ್ ನ ಹೊರಭಾಗದಲ್ಲಿ ಇದ್ದಕ್ಕಿದ್ದಂತೆ ಬಂದ ಉಗ್ರರ ಗುಂಪೊಂದು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಬ್ಯಾಂಕ್ ಬಳಿ ಇದ್ದ ಭದ್ರತಾ ಸಿಬ್ಬಂದಿಗಳ ಬಂದೂಕುಗಳನ್ನು ಕಸಿದು ಉಗ್ರರು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಗಾಯಗೊಂಡ ಪೊಲೀಸ್ ನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಾರಿಯಾಗಿರುವ ಉಗ್ರರಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com