ಲೆ. ಗವರ್ನರ್ ಗೆ ಇದೆ ಅಧಿಕಾರ

ದೆಹಲಿ ಸರ್ಕಾರದ ಅಧಿಕಾರದ ವ್ಯಾಪ್ತಿ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ವ್ಯಾಪ್ತಿ ಇದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ...
ಲೆಫ್ಟಿನೆಂಟ್ ಗರ್ವನರ್ ನಜೀಬ್ ಜಂಗ್ ಮತ್ತು ಅರವಿಂದ್ ಕೇಜ್ರಿವಾಲ್
ಲೆಫ್ಟಿನೆಂಟ್ ಗರ್ವನರ್ ನಜೀಬ್ ಜಂಗ್ ಮತ್ತು ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಸರ್ಕಾರದ ಅಧಿಕಾರದ ವ್ಯಾಪ್ತಿ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ವ್ಯಾಪ್ತಿ ಇದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದರ ಜತೆಗೆ ಲೆಫ್ಟಿನೆಂಟ್ ಗವರ್ನರ್ ಕೂಡ ಆಪ್ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳನ್ನು ಸೂಕ್ತವಾಗಿಯೇ ಪರಿಶೀಲಿಸಬೇಕು ಎಂದಿದೆ.

ಲೆಫ್ಟಿನೆಂಟ್ ಗವರ್ನರ್ ಅಧಿಕಾರ ವ್ಯಾಪ್ತಿ ಕುರಿತಾಗಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ್ದ ಸುತ್ತೋಲೆ ಪರ-ವಿರೋಧವಾಗಿ ಕೇಂದ್ರ, ದೆಹಲಿ ಸರ್ಕಾರಗಳು ಹೈಕೋರ್ಟಲ್ಲಿ ಮೊಕದ್ದಮೆ ಹೂಡಿದ್ದವು. ದೆಹಲಿ ಸರ್ಕಾರ ಅಧಿಕಾರ ವಿಚಾರಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಗೆ ಸಲಹೆ ನೀಡಿದ್ದನ್ನು ಪರಾಮರ್ಶೆ ನಡೆಸಬಹುದು. ಜತೆಗೆ ಹೆಚ್ಚಿನ ಮಾಹಿತಿಯನ್ನು ಕೇಳುವ ಸಾಂವಿಧಾನಿಕ ಅಧಿಕಾರ ಅವರಿಗೆ ಇದೆ ಎಂದು ನ್ಯಾ.ರಾಜೀವ್ ಶಖ್ದೇರ್ ನೇತೃತ್ವದ ದೆಹಲಿ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರ ಮೇ 21ರಂದು ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ಇದೆ ಎಂದು ನೀಡಿದ್ದ ಸುತ್ತೋಲೆ ರದ್ದು ಮಾಡಬೇಕು ಎಂದು ಆಪ್ ಸರ್ಕಾರದ ಮನವಿಗೆ ಸಂಬಂಧಿಸಿದಂತೆ ಹೈಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.
ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಸರ್ಕಾರಗಳಿಗೆ ಹಿರಿಯ ಅಧಿಕಾರಿಗಳನ್ನು ನೇಮಿಸುವ ಅಥವಾ ಅದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಗಳನ್ನು ಕಳುಹಿಸುವ ಅವಕಾಶ ಇತ್ತೇ ಎಂದು ತಿಳಿಯಲು ನ್ಯಾ.ಶಖ್ದೇರ್ ನೇತೃತ್ವದ ಪೀಠ ತಿಳಿಯಬಯಸಿತು.

ಸಂಶಯಾಸ್ಪದ: ಮತ್ತೊಂದೆಡೆ, ಗೃಹ ಸಚಿವಾಲಯದ ಅಧಿಸೂಚನೆ ಟೀಕಿಸಿ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಕುರಿತಂತೆ ಸುಪ್ರೀಂಕೋರ್ಟ್ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಸಂಶಯಾಸ್ಪದ ಎಂದು ಬಣ್ಣಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಕೇಂದ್ರ ಸಲ್ಲಿಸಿದ್ದ ಮೇಲ್ಮನವಿಯ ಹಿನ್ನೆಲೆಯಲ್ಲಿ ಮೂರು ವಾರಗಳೊಳಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ಸೂಚಿಸಿದೆ.
ಆದರೆ, ಮೇ 21ರಂದು ಕೇಂದ್ರ ಹೊರಡಿಸಿದ ಅಧಿಸೂಚನೆ ಸಂಶಯಾಸ್ಪದ ಎಂಬ ಮೇ 25ರ ದೆಹಲಿ ಹೈಕೋರ್ಟ್‍ನ ಪರಾಮರ್ಶೆಗೆ ಈ ಹಂತದಲ್ಲಿ ತಡೆಯಾಜ್ಞೆ ಇಲ್ಲ ಎಂದು ನ್ಯಾ.ಎ.ಕೆ.ಸಿಕ್ರಿ ನೇತೃತ್ವದ ರಜಾಕಾಲದ ನ್ಯಾಯಪೀಠ ಸ್ಪಷ್ಟಪಡಿಸಿದೆ. ಎಸಿಬಿಗೆ ಕೇಂದ್ರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆಯೂ ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆರು ವಾರಗಳಲ್ಲಿ ಉತ್ತರಿಸುವಂತೆಯೂ ಸೂಚಿಸಿದೆ.
ಆ.5ಕ್ಕೆ ವಿಚಾರಣೆ: ದೆಹಲಿಯಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ, ನೇಮಕಕ್ಕೆ ಸಂಬಂಧಿಸಿ ಲೆ.ಗ. ಅವರಿಗೆ ಹೆಚ್ಚಿನ ಅಧಿಕಾರ ನೀಡಿದ ಕೇಂದ್ರದ ಕ್ರಮ ಪ್ರಶ್ನಿಸಿ ಹೊರಡಿಸಲಾಗಿರುವ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಆ.5ರಂದು ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com