
ನವದೆಹಲಿ:ಕೇಂದ್ರ ಸಚಿವ ಸಂಪುಟವು ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಒಪ್ಪಿಗೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಮತ್ತೆ ಹೊರಡಿಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಬೇಕಾಗಿರುವ ಪರಿಹಾರಕ್ಕೆ ಒಂದು ಸ್ಪಷ್ಟವಾದ ಚೌಕಟ್ಟನ್ನು ಒದಗಿಸುವ ಕುರಿತು ವಿಧೇಯಕದಲ್ಲಿ ವಿವರಿಸಿ ಅದನ್ನು ಮತ್ತೆ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಯಿತು.
ಇದಕ್ಕೆ ಮತ್ತೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Advertisement