
ನವದೆಹಲಿ: ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‍ಗಳ ನ್ಯಾಯಮೂರ್ತಿ ಮತ್ತು ಮುಖ್ಯ ನ್ಯಾಯಮೂರ್ತಿಗಳ ಆಯ್ಕೆ ಇದ್ದಂಥ ಕೊಲೀಜಿಯಂ (ನ್ಯಾಯಮೂರ್ತಿಗಳ ಸಮಿತಿ)ನಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರ ನೇಮಕದಲ್ಲಿರಬೇಕು.
ಹೀಗೆಂದು ಹಾಲಿ ಮುಖ್ಯ ಚುನಾವಣಾ ಆಯುಕ್ತ ನಸೀಮ್ ಜೈದಿ ಅಭಿಪ್ರಾಯಪಟ್ಟಿದ್ದಾರೆ. ಪಿಟಿಐ ಜತೆಗಿನ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯಪಟ್ಟಿದ್ದಾರೆ. ಹಾಗೆಂದು ಹಾಲಿ ಇರುವ ವ್ಯವಸ್ಥೆ ಉತ್ತಮವಾಗಿಯೇ ಇದೆ ಎಂದು ಪ್ರತಿಪಾದಿಸಿದ್ದಾರೆ. ಕೊಲೀಜಿಯಂನಲ್ಲಿ ಪ್ರಧಾನಿ, ಲೋಕಸಭೆ ಪ್ರತಿಪಕ್ಷ ನಾಯಕ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಇರಬೇಕು ಎಂದಿದ್ದಾರೆ.
Advertisement