ಆಹಾರ ಪದಾರ್ಥಗಳ ಬೆಲೆ ಏರಿಕೆ: ಪ್ರಧಾನಿ ಮೌನಕ್ಕೆ ರಾಹುಲ್ ಗಾಂಧಿ ಆಕ್ರೋಶ

ಬೇಳೆ ಕಾಳುಗಳ ಬೆಲೆ ಏರಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದರ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ಪಾಟ್ನಾ: ಬೇಳೆಕಾಳುಗಳ ಬೆಲೆ ಏರಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದರ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇಳೆಕಾಳು, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಧಾನಿ ಮೋದಿಯೇ ಕಾರಣ, ಎಲ್ಲಕ್ಕಿಂತ ಹೆಚ್ಚಾಗಿ ಪ್ರಧಾನಿ ಮೋದಿ ಮೌನ ಜನರಿಗೆ ಅಚ್ಚರಿ ಮೂಡಿಸಿದೆ. ಮೋದಿ ಬಡಜನರನ್ನು ಆಹಾರದಿಂದ ವಂಚಿತರನ್ನಾಗಿಸಿದ್ದು ಕೇಂದ್ರ ಸರ್ಕಾರವನ್ನು ಅವರು ಶಪಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಪ್ರತಿ ಭಾಷಣದಲ್ಲೂ ಬಡವರ ಬಗ್ಗೆ ಮಾತನಾಡುವ ಮೋದಿ, ಬಡವರಿಗಾಗಿ ಏನನ್ನೂ ಮಾಡಿಲ್ಲ, ಅವರ ಜೀವನವನ್ನು ದುಸ್ತರಗೊಳಿಸಿದ್ದಾರೆ. ಕಪ್ಪು ಹಣ ವಾಪಸ್ ತರುವುದು ಸೇರಿದಂತೆ ಲೋಕಸಭಾ ಚುನಾವಣೆ ವೇಳೆ ನೀಡಿದ್ದ ಭರವಸೆಗಳ ಪೈಕಿ ಯಾವುದನ್ನೂ ಮೋದಿ ಈಡೇರಿಸಿಲ್ಲ. ಬೆಲೆ ಏರಿಕೆಯಾಗುತ್ತಿರುವುದರ ಬಗ್ಗೆ ಜನರಲ್ಲಿ ಆಕ್ರೋಶ ಉಂಟಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಬಿಹಾರದಲ್ಲಿ ಮಹಾಮತ್ರಿಗೆ ಬಹುಮತ ದೊರೆಯಲಿದ್ದು ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com