ಬಿಹಾರ ಚುನಾವಣೆ ಅಂತಿಮ ಹಂತ: ಶೇ.45.62ರಷ್ಟು ಮತದಾನ

ಬಿಹಾರ ವಿಧಾನಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಗುರುವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದ್ದು, ಈವರೆಗೂ ಶೇ.45.62ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ...
ಬಿಹಾರ ಚುನಾವಣೆ ಅಂತಿಮ ಹಂತ: ಶೇ.45.62ರಷ್ಟು ಮತದಾನ
ಬಿಹಾರ ಚುನಾವಣೆ ಅಂತಿಮ ಹಂತ: ಶೇ.45.62ರಷ್ಟು ಮತದಾನ
Updated on

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಗುರುವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದ್ದು, ಈವರೆಗೂ ಶೇ.45.62ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮಧುಬನಿ, ದರ್ಭಾಂಗ, ಸುಪುವಾಲ್, ಮಾಧೇಪುರ, ಸಹರ್ಸಾ, ಅರರಿಯಾ, ಕಿಸಾನ್ಗಂಜ್, ಪೂರ್ನೀ ಸೇರಿದಂತೆ ಒಟ್ಟು 57 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಚುನಾವಣೆಯಲ್ಲಿ 58 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 827 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.

ಮತದಾನ ಪ್ರಕ್ರಿಯೆಯು 14,709 ಮತಗಟ್ಟೆಗಳಲ್ಲಿ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಂಡಿರುವ ಚುನಾವಣಾ ಆಯೋಗವು  ಈಗಾಗಲೇ 74, 469  ರಾಜ್ಯ ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರ ಅರೆಸೇನಾ ಪಡೆಗಳನ್ನು ನಿಯೋಜಿಸಿದೆ ಎಂದು ತಿಳಿದುಬಂದಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com