ದೇಶ

ಪಂಜಾಬ್ ಗೆ ರಾಹುಲ್ ಭೇಟಿ: ಪ್ರತಿಭಟನೆ ವೇಳೆ ಸಾವನ್ನಪ್ಪಿದ್ದ ಕುಟುಂಬಗಳಿಗೆ ಸಾಂತ್ವನ

ಪಂಜಾಬ್ ಗೆ ರಾಹುಲ್ ಭೇಟಿ: ಪ್ರತಿಭಟನೆ ವೇಳೆ ಸಾವನ್ನಪ್ಪಿದ್ದ ಕುಟುಂಬಗಳಿಗೆ ಸಾಂತ್ವನ
ಸಾಂತ್ವನ ಹೇಳುತ್ತಿರುವ ರಾಹುಲ್ ಗಾಂಧಿ
Published On :

ಚಂಡಿಗಡ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ಪಂಜಾಬ್ ಗೆ ಭೇಟಿ ನೀಡಿದ್ದಾರೆ. ಕಳೆದ ತಿಂಗಳು ಪವಿತ್ರ ಪುಸ್ತಕವನ್ನು ಅಪವಿತ್ರಗೊಳಿಸಿದ್ದನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರ ಗುಂಡಿನ ಚಕಮಕಿ ವೇಳೆ ಮೃತ ಪಟ್ಟಿದ್ದ  ಇಬ್ಬರು ಸಿಖ್ ವ್ಯಕ್ತಿಗಳ ಕುಟುಂಬಕ್ಕೆ ರಾಹುಲ್ ಗಾಂಧಿ ಸಾಂತ್ವನ ಹೇಳಿದರು,

ಅಕ್ಟೋಬರ್ 14 ರಂದು ಪಂಜಾಬ್ ನ ಪರೀದಾಕೋಟ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಈ ವೇಳೆ ನಡೆದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದರು.

ಇನ್ನು ಮೃತ ವ್ಯಕ್ತಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಸುಮಾರು 8 ಕಿಮೀ ಪಾದಯಾತ್ರೆ ಕೈಗೊಂಡ ರಾಹುಲ್ ಗಾಂಧಿ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದರು. ಎರಡು ದಿನಗಳ ಪಂಜಾಬ್ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ರೈತರನ್ನು ಕೂಡ ಭೇಟಿ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.